ಜ. 24: ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಕಾಲೇಜಿನ ಮೂಲಸೌಕರ್ಯಗಳ ಬಲವರ್ಧನೆ, 2026–27ನೇ ಶೈಕ್ಷಣಿಕ ವರ್ಷದ ದಾಖಲಾತಿ ಕ್ರಮಗಳು ಹಾಗೂ ಅಗತ್ಯ ಪೂರಕ ವ್ಯವಸ್ಥೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ನಿರುಪಮಾ ಪ್ರಸಾದ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್ ಹಾಗೂ ಸಮಿತಿಯ ಸದಸ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು ಬಾಲಕಿಯರ ಸರಕಾರಿ ಪಿಯು ಕಾಲೇಜು ಉಡುಪಿ ಅಭಿವೃದ್ಧಿ ಸಮಿತಿ ಸಭೆ.






