ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಟ್ರಕ್‌ನ ಚಕ್ರದ ಅಡಿಗೆ ಸಿಲುಕಿದ ಯುವಕನೋರ್ವ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ .
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮಣಿಪಾಲ ಎಂಐಟಿ ಕ್ವಾರ್ಟಸ್‌ನ ನಿವಾಸಿ ಅವಿನಾಶ್ (19) ಎಂದು ಗುರುತಿಸಲಾಗಿದೆ.
ಅವಿನಾಶ್ ಸ್ನೇಹಿತರೊಂದಿಗೆ ಮಲ್ಪೆ ಬೀಚ್‌ಗೆ ತೆರಳಿ, ನಂತರ ಸ್ಕೂಟಿಯಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಿಗ್ನಲ್ ಬೀಳುತ್ತಿದ್ದಂತೆ ಅವಿನಾಶ್ ವೇಗವಾಗಿ ಸ್ಕೂಟಿ ಚಲಾಯಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟಿ ಟ್ರಕ್‌ಗೆ ಡಿಕ್ಕಿಯಾಗಿ, ಯುವಕ ಟ್ರಕ್ ಟಯರ್ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಅಪಘಾತಕ್ಕೆ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯೇ ಕಾರಣವೆಂದು ಪೊಲೀಸರು ಶಂಕಿಸಿದ್ದು, ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






