ಉಡುಪಿ ಜ.26 : ಪೂರ್ಣಪ್ರಜ್ಞ ವಿದ್ಯಾಪೀಠದ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶ್ರೀ ಬ್ರಹ್ಮಸೂತ್ರ ಅನುವ್ಯಾಖ್ಯಾನ ನ್ಯಾಯ ಸುಧಾಮಂಗಲೋತ್ಸವವು ಭಕ್ತಿಭಾವದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಪುತ್ತಿಗೆ ಹಿರಿಯ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರಿಯ ಮಠಾಧೀಶರಾದ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.






