ಜ. 26:ಗಣರಾಜ್ಯೋತ್ಸವದ ಸಂಭ್ರಮದ ಅಂಗವಾಗಿ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗಾಗಿ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ಡಾ. ಮುರಳಿಧರ್ ಭಟ್ ಅವರು ಸ್ಪರ್ಧೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಎಂಟು ಕಿಲೋಮೀಟರ್ ದೂರವನ್ನು ಎಲ್ಲ ವಿದ್ಯಾರ್ಥಿಗಳೂ ಯಶಸ್ವಿಯಾಗಿ ಕ್ರಮಿಸಿ ಸ್ಪರ್ಧೆಯನ್ನು ಪೂರ್ಣಗೊಳಿಸಿದರು.
ಕಾರ್ಯಕ್ರಮದಲ್ಲಿ ಯಶಸ್ಸಿಗೆ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿಯವರು, ಜೇಸಿ ಸದಸ್ಯರು ಮತ್ತು ಕಾರ್ಯದರ್ಶಿ ಯವರು ಉಪಸ್ಥಿತರಿದ್ದರು.






