Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ನೇಮಕಾತಿ: ಪದವೀಧರರಿಗೆ ಅವಕಾಶ..!!

Dhrishya News by Dhrishya News
26/01/2026
in ರಾಜ್ಯ/ ರಾಷ್ಟ್ರೀಯ
0
RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ನೇಮಕಾತಿ: ಪದವೀಧರರಿಗೆ ಅವಕಾಶ..!!
0
SHARES
21
VIEWS
Share on FacebookShare on Twitter

ಜ 26:ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಆಸೆ ಹೊಂದಿರುವ ಯುವಕರಿಗೆ ಶುಭವಾರ್ತೆ. ರೈಲ್ವೆ ನೇಮಕಾತಿ ಮಂಡಳಿ (RRB–228) ಐಸೊಲೇಟೆಡ್ ಕ್ಯಾಟಗರಿ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಚೀಫ್ ಲೀಗಲ್ ಅಸಿಸ್ಟೆಂಟ್, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕ ಸೇರಿದಂತೆ ಹಲವು ಮಹತ್ವದ ಹುದ್ದೆಗಳು ಒಳಗೊಂಡಿವೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಆರ್‌ಆರ್‌ಬಿ ಪ್ರಕಟಿಸಿರುವ ಮಾಹಿತಿ ಪ್ರಕಾರ, ಈ ನೇಮಕಾತಿಯಲ್ಲಿ ಅತಿಹೆಚ್ಚು ಹುದ್ದೆಗಳು ಜೂನಿಯರ್ ಹಿಂದಿ ಅನುವಾದಕರಿಗೆ ಮೀಸಲಾಗಿದ್ದು, ಒಟ್ಟು 202 ಹುದ್ದೆಗಳು ಲಭ್ಯವಿವೆ. ಜೊತೆಗೆ, ಮುಖ್ಯ ಕಾನೂನು ಸಹಾಯಕ ಹುದ್ದೆಗಳಿಗೆ 22, ಸಾರ್ವಜನಿಕ ಅಭಿಯೋಜಕರಿಗೆ 7, ಸೀನಿಯರ್ ಪಬ್ಲಿಕ್ ಇನ್ಸ್‌ಪೆಕ್ಟರ್‌ಗಳಿಗೆ 15 ಹಾಗೂ ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರಿಗೆ 24 ಹುದ್ದೆಗಳಿವೆ.

ತಾಂತ್ರಿಕ ಮತ್ತು ವೈಜ್ಞಾನಿಕ ವಿಭಾಗದಲ್ಲೂ ನೇಮಕಾತಿ ನಡೆಯುತ್ತಿದ್ದು, ವೈಜ್ಞಾನಿಕ ಸಹಾಯಕ (ತರಬೇತಿ) 2, ಲ್ಯಾಬ್ ಅಸಿಸ್ಟೆಂಟ್ ಗ್ರೇಡ್-2 (ರಸಾಯನಶಾಸ್ತ್ರ ಮತ್ತು ಲೋಹಶಾಸ್ತ್ರ) 39 ಹಾಗೂ ವೈಜ್ಞಾನಿಕ ಮೇಲ್ವಿಚಾರಕರಿಗೆ ಹುದ್ದೆ ಲಭ್ಯವಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಪ್ರತಿ ಹುದ್ದೆಗೆ ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಜೂನಿಯ‌ರ್ ಹಿಂದಿ ಅನುವಾದಕ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಪದವಿ ಅಗತ್ಯವಿದೆ. ಮುಖ್ಯ ಕಾನೂನು ಸಹಾಯಕ ಹಾಗೂ ಸಾರ್ವಜನಿಕ ಅಭಿಯೋಜಕ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ (ಕಾನೂನು ಪದವಿ) ಕಡ್ಡಾಯವಾಗಿದೆ. ತಾಂತ್ರಿಕ ಮತ್ತು ವೈಜ್ಞಾನಿಕ ಹುದ್ದೆಗಳಿಗೆ ವಿಜ್ಞಾನದಲ್ಲಿ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು.

ವಯೋಮಿತಿಯ ವಿಚಾರಕ್ಕೆ ಬಂದರೆ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು. ಹುದ್ದೆ ಅನುಗುಣವಾಗಿ ಗರಿಷ್ಠ ವಯೋಮಿತಿ 30 ರಿಂದ 40 ವರ್ಷಗಳವರೆಗೆ ನಿಗದಿಯಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಮೀಸಲು ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಮತ್ತು ಸೌಲಭ್ಯಗಳು:

ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆ ಅನುಗುಣವಾಗಿ ಆಕರ್ಷಕ ವೇತನ ನೀಡಲಾಗುತ್ತದೆ. ಹಲವಾರು ಹುದ್ದೆಗಳಿಗೆ ತಿಂಗಳಿಗೆ ರೂ. 35,400 ಮೂಲ ವೇತನವಿದ್ದರೆ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ಹಿರಿಯ ಹುದ್ದೆಗಳಿಗೆ ತಿಂಗಳಿಗೆ ರೂ. 44,000 ವರೆಗೆ ವೇತನ ಲಭ್ಯವಿದೆ. ಇದಲ್ಲದೆ, ತುಟ್ಟಿಭತ್ಯೆ (DA), ಮನೆ ಬಾಡಿಗೆ ಭತ್ಯೆ (HRA), ಪ್ರಯಾಣ ಭತ್ಯೆ ಸೇರಿದಂತೆ ಇತರೆ ಸರ್ಕಾರಿ ಸೌಲಭ್ಯಗಳು ಸಹ ದೊರೆಯುತ್ತವೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ರೂ. 250 ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ರೈಲ್ವೆ ಕ್ಷೇತ್ರದಲ್ಲಿ ಭದ್ರ ಮತ್ತು ಗೌರವಾನ್ವಿತ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಹರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ರೈಲ್ವೆ ನೇಮಕಾತಿ ಮಂಡಳಿ ಸಲಹೆ ನೀಡಿದೆ.

Previous Post

ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವಕ್ಕೆ ಸಂಭ್ರಮದ ಸಾಕ್ಷಿ..!!

Next Post

ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News