Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆಯಿಂದ ‘CET’ ಪರೀಕ್ಷೆ : ಪರೀಕ್ಷಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Dhrishya News by Dhrishya News
19/05/2023
in ಕರಾವಳಿ
0
0
SHARES
14
VIEWS
Share on FacebookShare on Twitter
ಉಡುಪಿ : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು.ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು.ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟಾçನಿಕ್ ಉಪಕರಣಗಳು, ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 3 ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ಮಾಲಕ ರವಿ ಪ್ರಕಾಶ್ ಪ್ರಭು ರವರಿಂದ ಶಾಸಕರಿಗೆ ಶಾಲು ಹೊದಿಸಿ ಪಟಾಕಿ ಸಿಡಿಸಿ ಸoಬ್ರಮ !!…

Next Post

ಉಡುಪಿ :ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check