ಉಡುಪಿ: ಜನವರಿ 27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಕುಟುಂಬ ಸಮೇತರಾಗಿ ಜನವರಿ 26ರಂದು ಶ್ರೀಕ್ಷೇತ್ರ ಉಚ್ಚಿಲಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕ್ಷೇತ್ರದ ಧಾರ್ಮಿಕ ಮಹತ್ವ ಮತ್ತು ಅಭಿವೃದ್ಧಿ ಕುರಿತು ಸಂಕ್ಷಿಪ್ತವಾಗಿ ಚರ್ಚಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭೇಟಿ ವೇಳೆ ಭಕ್ತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಅವರಿಗೆ ಆತ್ಮೀಯ ಸ್ವಾಗತ ಕೋರಿದರು.






