ಉಡುಪಿ ಜ.27 : ತಿಂಗಳೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಪ್ರದಾನ ಮಾಡಲಾಗುವ ಪ್ರತಿಷ್ಠಿತ ತಿಂಗಳೆ ಪ್ರಶಸ್ತಿಗೆ ಈ ಬಾರಿ ಶಿಕ್ಷಕ, ಶಾಲಾ ಯಕ್ಷಶಿಕ್ಷಣ ಸಂಘಟಕ, ಸಮಾಜ ಸೇವಕ ಹಾಗೂ ಕಲಾರಂಗದ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಸಾಹಿತ್ಯ, ಶಿಕ್ಷಣ, ಯಕ್ಷಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ನಿರಂತರ ಹಾಗೂ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಮಾರ್ಚ್ 8ರಂದು ನಡೆಯಲಿರುವ ತಿಂಗಳೆ ಸಾಹಿತ್ಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ವಿಷಯವನ್ನು ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






