Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ

ನಾಟಕಗಳ ಯಶಸ್ವಿಗೆ ಸದಾಭಿರುಚಿಯ ಪ್ರೇಕ್ಷಕರು ಅಗತ್ಯ : ಡಾ.ತಲ್ಲೂರು

Dhrishya News by Dhrishya News
28/01/2026
in ಸುದ್ದಿಗಳು
0
ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ
0
SHARES
16
VIEWS
Share on FacebookShare on Twitter

ಉಡುಪಿ : ಜನವರಿ 28: ಆಧುನಿಕ ಕಾಲಘಟ್ಟದಲ್ಲಿ ಇಂಟರ್‌ನೆಟ್‌ನಲ್ಲಿ ಮುಳುಗಿರುವ ಜನರನ್ನು ನಾಟಕದತ್ತ ಸೆಳೆಯುವುದು ಸುಲಭ ಸಾಧ್ಯವಲ್ಲ. ಇದು ಉತ್ತಮ ನಾಟಕಗಳಿಂದ ಮಾತ್ರ ಸಾಧ್ಯ. ಆದರೆ ಈ ಉತ್ತಮ ನಾಟಕಗಳು ಸದಾಭಿರುಚಿಯ ಪ್ರೇಕ್ಷಕರಿಂದ ಮಾತ್ರ ಯಶಸ್ವಿಯಾಗ ಬಲ್ಲವು ಎಂದು ರಂಗಭೂಮಿ ಉಡುಪಿ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.

ಅವರು ಸೋಮವಾರ ಪರ್ಕಳದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಅಧ್ಯಕ್ಷ ಜಯರಾಮ ಮಣಿಪಾಲ ಅವರ ಸಾರಥ್ಯದಲ್ಲಿ ಹಮ್ಮಿಕೊಂಡ ಮೂರು ದಿನಗಳ ನಾಟಕೋತ್ಸವ ಕಾರ್ಯಕ್ರಮದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಟಕಗಳು ಸಮಾಜದ ಜೀವಂತಿಕೆಯ ಸಾಕ್ಷಿಪ್ರಜ್ಞೆಯಾಗಿವೆ. ಸಾಮಾಜಿಕ ಸಂದೇಶವನ್ನು ಸಾರುವ ಕಥಾಹಂದರಗಳನ್ನು ಒಳಗೊಂಡಿರುವ ನಾಟಕಗಳಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದ ಅವರು ರಂಗಭೂಮಿ ಉಡುಪಿ ವತಿಯಿಂದ ಪ್ರದರ್ಶಿಸಲ್ಪಟ್ಟ ‘ಕಾಲಚಕ್ರ’ ನಾಟಕವನ್ನು ಉದಾಹರಿಸಿದರು. 

ನಾಟಕಗಳಾಗಲಿ, ಸಿನೆಮಾಗಳಾಗಲಿ ಬರೀ ಮನರಂಜನೆಯ ದೃಷ್ಟಿಯನ್ನಿಟ್ಟುಕೊಂಡು ಪ್ರದರ್ಶನಗೊಂಡರೆ ಅದರಿಂದ ಸಮಾಜಕ್ಕೆ ಉಪಯೋಗವಾಗದು. ಸಾಮಾಜಿಕ ಸಂದೇಶವನ್ನು ಯುವ ಪೀಳಿಗೆಗೆ ಮುಟ್ಟಿಸುವ ನಾಟಕಗಳು ಇಂದಿನ ಅಗತ್ಯವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕಲಾವಿದ ಜಯರಾಮ ಮಣಿಪಾಲ ಅವರು ತಮ್ಮ ತಂದೆತಾಯಿ ಹೆಸರಲ್ಲಿ ಗುರುವಸಂತಿ ಸಾಂಸ್ಕೃತಿಕ ವೇದಿಕೆಯನ್ನು ಹುಟ್ಟುಹಾಕಿ ಆ ಮೂಲಕ ನಾಟಕೋತ್ಸವವನ್ನು ಆಯೋಜಿಸಿ ಸಮಾಜಕ್ಕೆ ತಂದೆತಾಯಿಯರ ಮಹತ್ವವನ್ನು ಸಾರುವ ಕೆಲಸ ಮಾಡುತ್ತಿರುವುದು ಅಭಿನಂದನೀಯ. ಮಕ್ಕಳಲ್ಲಿ ನೈತಿಕ ಪ್ರಜ್ಞೆಯನ್ನು ಬಾಲ್ಯದಲ್ಲಿಯೇ ಬೆಳೆಸಿದರೆ ಅವರು ಬೆಳೆದಂತೆ ತಂದೆ ತಾಯಿ, ಗುರುಹಿರಿಯರಿಗೆ ಪ್ರೀತಿ, ಗೌರವವನ್ನು ಕೊಡುವ ಮನೋಭಾವವನ್ನು ಬೆಳೆಸಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ನಾನು ಯಕ್ಷಗಾನ ಕಲಾರಂಗದ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವ ಯಕ್ಷ ಶಿಕ್ಷಣ ಆರಂಭಿಸಲಾಯಿತು. ಅದು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಇಂದು ಏನಿಲ್ಲವೆಂದರೂ ಸುಮಾರು 3,500ಕ್ಕೂ ಅಧಿಕ ಮಕ್ಕಳು ಯಕ್ಷಗಾನವನ್ನು ಕಲಿಯುತ್ತಿದ್ದಾರೆ. ನಮ್ಮ ಪುರಾಣದ ಕಥೆಗಳು, ನೈತಿಕ ಮೌಲ್ಯಗಳನ್ನು ಈ ರೀತಿಯ ಕಲೆಯ ಮೂಲಕ ಮಕ್ಕಳ ಮನಸ್ಸಲ್ಲಿ ಬಿತ್ತಲಾಗುತ್ತಿದೆ. ಇದೇ ಮಾದರಿಯಲ್ಲಿ ಇದೀಗ ರಂಗಭೂಮಿ ಉಡುಪಿ ವತಿಯಿಂದ ಕಳೆದ ಎರಡು ವರ್ಷಗಳಲ್ಲಿ ನಾಟಕವನ್ನು ಕಲಿಸುವ ರಂಗಶಿಕ್ಷಣವನ್ನು ನೀಡಲಾಗುತ್ತಿದೆ. ಈ ಬಾರಿ ಸುಮಾರು 12 ಶಿಕ್ಷಣ ಸಂಸ್ಥೆಗಳಲ್ಲಿ ಈ ತರಬೇತಿ ನಡೆದಿದೆ. ತರಬೇತಿ ಪಡೆದ ಮಕ್ಕಳಿಂದ ನಾಟಕೋತ್ಸವ ಕೂಡಾ ನಡೆದಿದೆ. ಮುಂದೆ ಜಾನಪದವನ್ನು ಕೂಡಾ ಶಾಲೆಗಳಲ್ಲಿ ಪ್ರಾರಂಭಿಸಬೇಕು ಎನ್ನುವ ಕೂಗು ಕೇಳಿ ಬಂದಿದೆ. ಇದಕ್ಕೆಲ್ಲಾ ಸಮಾಜದ ಪ್ರೋತ್ಸಾಹದ ಅಗತ್ಯವಿದೆ. ಸಮಾಜ, ಸಂಘಸoಸ್ಥೆಗಳು ಕೈ ಜೋಡಿಸಿದರೆ ಮಹತ್ತರವಾದುದ್ದನ್ನು ಸಾಧಿಸಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪರ್ಕಳದ ಸುರಕ್ಷಾ ಸಭಾಭವನದ ರಾಮಮೂರ್ತಿ ಭಟ್, ರೋಟರಿ ಮಾಜಿ ಗವರ್ನರ್ ಬಿ.ರಾಜಾರಾಮ ಭಟ್, ನಿವೃತ್ತ ಬ್ಯಾಂಕ್ ಅಧಿಕಾರಿ ವಿಠಲ ಶೆಟ್ಟಿಗಾರ್ ಸಗ್ರಿ, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಅಧ್ಯಕ್ಷರಾದ ರವಿ ಶೆಟ್ಟಿಗಾರ್ ಕಾರ್ಕಳ, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಪರ್ಕಳ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಅಶೋಕ್ ಕಾಮತ್ ಕೊಡಂಗೆ, ಕಾರ್ಯಕ್ರಮದ ರೂವಾರಿ ಜಯರಾಮ ಮಣಿಪಾಲ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಲಾವಿದ ಸುಂದರ ನಂದ್ಯಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಕರ ಮಣಿಪಾಲ್ ರಚಿಸಿ, ನಟಿಸಿ, ನಿರ್ದೇಶಿಸಿರುವ ‘ಅರ್ಬುದಾ – ಪುಣ್ಯಕೋಟಿ ‘ ಜಾನಪದ ನಾಟಕದ ಪ್ರದರ್ಶನ ನಡೆಯಿತು.

—-

ಫೋಟೊ ಲಗತ್ತಿಸಿದೆ.

—————-

Previous Post

ಮಹಾರಾಷ್ಟ್ರದ ಬಾರಾಮತಿಯಲ್ಲಿ ಭೀಕರ ವಿಮಾನ ದುರಂತ – ಡಿಸಿಎಂ ಅಜಿತ್ ಪವಾರ್ ಮೃತ್ಯು…!!

Next Post

ದೆಹಲಿಯಲ್ಲಿ ಅಮಾನವೀಯ ಕೃತ್ಯ: 6 ವರ್ಷದ ಬಾಲಕಿಗೆ ಮೂವರು ಅಪ್ರಾಪ್ತರಿಂದ ದೌರ್ಜನ್ಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೆಹಲಿಯಲ್ಲಿ ಅಮಾನವೀಯ ಕೃತ್ಯ: 6 ವರ್ಷದ ಬಾಲಕಿಗೆ ಮೂವರು ಅಪ್ರಾಪ್ತರಿಂದ ದೌರ್ಜನ್ಯ…!!

ದೆಹಲಿಯಲ್ಲಿ ಅಮಾನವೀಯ ಕೃತ್ಯ: 6 ವರ್ಷದ ಬಾಲಕಿಗೆ ಮೂವರು ಅಪ್ರಾಪ್ತರಿಂದ ದೌರ್ಜನ್ಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026

Recent News

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved