ಬೆಂಗಳೂರು ಜ. 29: ಬುಧವಾರ ತಡರಾತ್ರಿ ದೊಮ್ಮಲೂರು ಸಮೀಪದ ಕಮಾಂಡೋ ಆಸ್ಪತ್ರೆ ಬಳಿ ಪಾನಮತ್ತ ಸ್ಥಿತಿಯಲ್ಲಿ ಕಾರು ಚಲಾಯಿಸಿದ ಚಿತ್ರ ನಟ ಮಯೂರ್ ಪಟೇಲ್ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ಅತಿವೇಗದಲ್ಲಿ ಫಾರ್ಚುನರ್ ಕಾರು ಚಾಲನೆ ಮಾಡುತ್ತಿದ್ದ ವೇಳೆ ರಸ್ತೆಬದಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಕಾರುಗಳು ಜಖಂಗೊಂಡಿವೆ. ಘಟನೆಯಲ್ಲಿ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಶ್ರೀನಿವಾಸ್ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರನ್ನು ಪೊಲೀಸರು ಜಪ್ತಿ ಮಾಡಿದ್ದು, ಇನ್ಸೂರೆನ್ಸ್ ಕೂಡ ಮಾಡಿರಲಿಲ್ಲ ಎಂದು ಹೇಳಲಾಗಿದೆ.
ಮಯೂರ್ ಪಟೇಲ್ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ.






