ಕಾರ್ಕಳ ಜ. 28:ಕಾರ್ಕಳ ತಾಲ್ಲೂಕಿನ ನಿಟ್ಟೆ ಗ್ರಾಮದ ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ದೈವಗಳ ಸಿರಿ ಸಿಂಗಾರದ ನೇಮೋತ್ಸವವು ಜನವರಿ 23 ಮತ್ತು 24ರಂದು ವಿಜೃಂಭಣೆಯಿಂದ ನೆರವೇರಿತು.
ಉತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಕ್ತಾದಿಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು ಶ್ರದ್ಧಾಭಕ್ತಿಯಿಂದ ನಡೆಯಿತು.






