ಮಂಗಳೂರು, ಜ.29: ದಕ್ಷಿಣ ಕನ್ನಡ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ 70 ಕೋಟಿ ವೆಚ್ಚದ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ಎರಡು ಅಂತಸ್ತಿನ ನೂತನ ಒಪಿಡಿ ಕಟ್ಟಡ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕ ಹಾಗೂ ಸಿಸಿ ಟಿವಿ ಅಳವಡಿಕೆ ಸೇರಿದಂತೆ ಎಲ್ಲಾ ಅನುಕೂಲತೆಗಳು ನೀಡಲಾಗಲಿವೆ.
ಸುದ್ದಿಗೋಷ್ಠಿಯಲ್ಲಿ, “ವೆನ್ಹಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ರೂಪಿಸುವುದು ಆರೋಗ್ಯ ಇಲಾಖೆಯ ಗುರಿ. ಎಲ್ಲಾ ಸೌಲಭ್ಯಗಳು ಸಾರ್ವಜನಿಕರಿಗೆ ಲಭ್ಯವಾಗಬೇಕು,” ಎಂದು ಸಚಿವರು ತಿಳಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.






