ಬೆಂಗಳೂರು ಜ. 30:ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವರ್ಣರಂಜಿತವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ *17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes)*ಕ್ಕೆ ಚಾಲನೆ ನೀಡಲಾಯಿತು. ಅರ್ಥಪೂರ್ಣ ಸಿನಿಮಾಗಳ ಪ್ರದರ್ಶನದ ಮೂಲಕ ಅವುಗಳ ಆಶಯಗಳು ಹೆಚ್ಚೆಚ್ಚು ಜನರಿಗೆ ತಲುಪಲಿ ಹಾಗೂ ಈ ವರ್ಷದ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿ ಎಂದು ಶುಭ ಹಾರೈಸಲಾಯಿತು.
ಕಾರ್ಯಕ್ರಮಕ್ಕೆ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಈ ಸಾಲಿನ BIFFes ರಾಯಭಾರಿ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ. ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯ ಚಿದಾನಂದ ಪಟೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






