ಸುಳ್ಯ ಜ. 30: ಮಣಿ–ಮೈಸೂರು ಹೆದ್ದಾರಿಯ ಸಂಪಾಜೆ ಗೇಟ್ ಬಳಿ ಗುರುವಾರ (ಜ.29) ಅತೀ ಭೀಕರ ಅಪಘಾತ ಸಂಭವಿಸಿದೆ. ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಅಟೋ ರಿಕ್ಷಾದ ಚಾಲಕ ಸುಂದರ ಚಿಟ್ಟಿಕಾನ (56) ರಸ್ತೆ ಮೇಲೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಅಡಿಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಟೋ ರಿಕ್ಷಾದಲ್ಲಿದ್ದ ಮತ್ತೊಬ್ಬ ಪ್ರಯಾಣಿಕನಿಗೆ ಗಾಯಗಳು ಉಂಟಾಗಿ, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಅಟೋರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು- ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಅಟೋರಿಕ್ಷಾಕ್ಕೆ ಗುದ್ದಿ ಪರಾರಿಯಾಗಿದೆ.
ಈ ವೇಳೆ ಅಟೋ ಚಾಲಕ ರಸ್ತೆಗೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಅಡಿಗೆ ರಿಕ್ಷಾ ಚಾಲಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಟೋ ರಿಕ್ಷಾದಲ್ಲಿದ್ದ ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಎಸಗಿದ ಕಾರು ನಿಲ್ಲಿಸದೇ ಅಲ್ಲಿಂದ ತೆರಳಿದೆ.






