ಉಡುಪಿ, ಜನವರಿ.31:ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗುರುವಾರ ಶ್ರೀಕರ ಪೂಜೆ ಹಾಗೂ ಭೂತರಾಜರ ಪೂಜೆ ಭಕ್ತಿಭಾವದಿಂದ ನೆರವೇರಿತು.


ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.






