ಉಡುಪಿ : ಜನವರಿ 31:ಉಡುಪಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ನೇಮಕ ಮಾಡಲಾಗಿದೆ.

ಈ ನೇಮಕಾತಿಯನ್ನು ಶನಿವಾರ, ಜನವರಿ 31, 2026ರಂದು ರೋಮ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ( ಭಾರತೀಯ ಸಮಯ ಸಂಜೆ 4.30ಕ್ಕೆ)ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದೇ ಸಮಯದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಘೋಷಿಸಲಾಯಿತು.






