Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

Dhrishya News by Dhrishya News
01/02/2026
in ಸುದ್ದಿಗಳು
0
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ
0
SHARES
30
VIEWS
Share on FacebookShare on Twitter

ಉಡುಪಿ : ಫೆಬ್ರವರಿ 01: ಬ್ರಹ್ಮಾವರ ತಾಲೂಕಿನ ಕೋಡಿಬೆಂಗ್ರೆಯಲ್ಲಿ ನಡೆದ ಭೀಕರ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದೋಣಿ ವಿಹಾರ ವೇಳೆ ಸುರಕ್ಷತಾ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಿದ್ದೇ ದುರಂತಕ್ಕೆ ಕಾರಣವೆಂದು ತನಿಖೆಯಿಂದ ತಿಳಿದುಬಂದಿದೆ.

ಬಂಧಿತರನ್ನು ಕೋಡಿ ಗ್ರಾಮದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20) ಹಾಗೂ ವಾಸು ಮೆಂಡನ್ (52) ಎಂದು ಗುರುತಿಸಲಾಗಿದೆ.

ಜನವರಿ 26ರಂದು ಬೆಳಿಗ್ಗೆ ಮೈಸೂರಿನಿಂದ ಬಂದ ಗುರುಪ್ರಸಾದ್ (34) ಸೇರಿದಂತೆ ಒಟ್ಟು 29 ಪ್ರವಾಸಿಗರು ದೋಣಿ ವಿಹಾರಕ್ಕೆ ತೆರಳಿದ್ದರು. ಪ್ರವಾಸಿಗರನ್ನು ಎರಡು ಪ್ರತ್ಯೇಕ ದೋಣಿಗಳಲ್ಲಿ ಕಳುಹಿಸಲಾಗಿತ್ತು. ಒಂದು ದೋಣಿಯಲ್ಲಿ 14 ಜನ ಮತ್ತು ಇನ್ನೊಂದರಲ್ಲಿ 15 ಜನ ಇದ್ದರು.

ಬೆಳಿಗ್ಗೆ ಸುಮಾರು 11.15ರ ವೇಳೆಗೆ ಸ್ವರ್ಣ ನದಿಯಲ್ಲಿ ವಿಹಾರ ನಡೆಸುತ್ತಿದ್ದಾಗ, ‘ದಿ ವೇವ್ ರೈಡರ್’ ಹೆಸರಿನ ದೋಣಿಯನ್ನು ನಿರ್ವಾಹಕರು ಇದ್ದಕ್ಕಿದ್ದಂತೆ ಎಡಕ್ಕೆ ತಿರುಗಿಸಿದ ಪರಿಣಾಮ ದೋಣಿ ಮಗುಚಿ ಬಿದ್ದಿದೆ. ಪರಿಣಾಮ ದೋಣಿಯಲ್ಲಿದ್ದ 14 ಜನ ನೀರಿಗೆ ಬಿದ್ದಿದ್ದಾರೆ.

ಈ ದುರಂತದಲ್ಲಿ ಶಂಕರಪ್ಪ (27), ಸಿಂಧು ಪಿ (23) ಮತ್ತು ದಿಶಾ (26) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಳಿದ ಪ್ರಯಾಣಿಕರನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ಘಟನೆಯ ಕುರಿತು ದೂರುದಾರ ಗುರುಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 284, 125(ಎ) ಮತ್ತು 106 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆಯ ವೇಳೆ, ಆರೋಪಿಗಳು ಪ್ರವಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಗಿ ಅಥವಾ ಅನುಮತಿ ಪಡೆಯದೇ ದೋಣಿ ವಿಹಾರ ನಡೆಸುತ್ತಿದ್ದು, ಹಲವು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Previous Post

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

Next Post

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved