Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬಜೆಟ್ 2026–27: ಕರ್ನಾಟಕಕ್ಕೆ ಭಾರೀ ಅನುದಾನ ಹೆಚ್ಚಳ…!!

Dhrishya News by Dhrishya News
04/02/2026
in ರಾಜ್ಯ/ ರಾಷ್ಟ್ರೀಯ
0
ಬಜೆಟ್ 2026–27: ಕರ್ನಾಟಕಕ್ಕೆ ಭಾರೀ ಅನುದಾನ ಹೆಚ್ಚಳ…!!
0
SHARES
19
VIEWS
Share on FacebookShare on Twitter

ಬೆಂಗಳೂರು ಫೆ. 04: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026–27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ದೊರೆಯುವ ಕೇಂದ್ರ ಅನುದಾನದಲ್ಲಿ ಭಾರೀ ಏರಿಕೆ ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಕೇಂದ್ರದ ಮಾಹಿತಿ ಪ್ರಕಾರ, 2026–27ನೇ ಸಾಲಿನ ಬಜೆಟ್ ಅಂದಾಜಿನಲ್ಲಿ ಕರ್ನಾಟಕಕ್ಕೆ ಒಟ್ಟು ₹63,049 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಇದಕ್ಕೆ ಹೋಲಿಕೆ ಮಾಡಿದರೆ, 2025–26ನೇ ಸಾಲಿನಲ್ಲಿ ರಾಜ್ಯಕ್ಕೆ ₹16,000 ಕೋಟಿ ಸಹಾಯಧನವನ್ನು ಮಾತ್ರ ನಿಗದಿಪಡಿಸಲಾಗಿತ್ತು.

ಅಲ್ಲದೆ, 2014ರಿಂದ 2026ರವರೆಗೆ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯ ರೂಪದಲ್ಲಿ ₹3.89 ಲಕ್ಷ ಕೋಟಿ ರೂ. ಹಾಗೂ ವಿವಿಧ ಯೋಜನೆಗಳ ಸಹಾಯಧನವಾಗಿ ₹2.36 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಬಂಡವಾಳ ವೆಚ್ಚಕ್ಕಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆಯಡಿ, ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಅವಧಿಯ ಬಡ್ಡಿರಹಿತ ಸಾಲದ ರೂಪದಲ್ಲಿ ವಿಶೇಷ ನೆರವು ನೀಡಲಾಗುತ್ತದೆ. ಇದರ ಬಡ್ಡಿ ವೆಚ್ಚವನ್ನು ಕೇಂದ್ರವೇ ಸಂಪೂರ್ಣವಾಗಿ ಭರಿಸುತ್ತದೆ. ಇದು ಹಣಕಾಸು ಆಯೋಗದ ಶಿಫಾರಸುಗಳಿಗೂ ಮೀರಿದ ನೆರವಾಗಿದೆ. 2025 26 (ಜನವರಿ)ಯವರೆಗೆ 2,613 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಇದರಡ 2020ರಿಂದ 2026ರ ಅವಧಿಯಲ್ಲಿ ಒಟ್ಟು 15,945 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದೆ.

2,059 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಕಾರಿಡಾ‌ರ್ ಅಭಿವೃದ್ಧಿ:

2025ರ ಜೂನ್ ಅಂತ್ಯದ ಹೊತ್ತಿಗೆ ರಾಜ್ಯದಲ್ಲಿ 8191 ಕಿ.ಮೀ ಗೂ ಹೆಚ್ಚು ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗಿದೆ. ಭಾರತಮಾಲಾ ಪರಿಯೋಜನೆಯಡಿ ನಿರ್ಮಿಸಲಾಗುತ್ತಿರುವ ಅನೇಕ ಗ್ರೀನ್ ಫೀಲ್ಡ್ ಕಾರಿಡಾರ್‌ಗಳು ಕರ್ನಾಟಕದ ಮೂಲಕ ಹಾದುಹೋಗುತ್ತವೆ. ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ವೇ, ಬೆಂಗಳೂರು ವರ್ತುಲ ರಸ್ತೆ ಮತ್ತು ಸೋಲಾಪುರ ಕರ್ನೂಲ್ ಚೆನ್ನೈ ಕಾರಿಡಾರ್‌ಗಳು ಸೇರಿವೆ. ಭಾರತಮಾಲಾ ಯೋಜನೆ ಹಂತ 1ರ ಅಡಿಯಲ್ಲಿ ಕರ್ನಾಟಕದಲ್ಲಿ 63,304 ಕೋಟಿ ರೂ.ಗಳ ಒಟ್ಟು ಬಂಡವಾಳ ವೆಚ್ಚದೊಂದಿಗೆ 2,059 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ಗಳ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಜನವರಿ 2026ರ ಮಾಹಿತಿಯಂತೆ ರಾಜ್ಯದಲ್ಲಿ ಪಿಎಂ ಜನ ಧನ್ ಯೋಜನೆಯ 2.12 ಕೋಟಿಗೂ ಹೆಚ್ಚು ಖಾತೆಗಳು, ಪಿಎಂ ಜೀವನ ಜ್ಯೋತಿ ವಿಮಾ ಯೋಜನೆಯಡಿ 1.67 ಕೋಟಿಗೂ ಹೆಚ್ಚು ನೋಂದಾಣಿಗಳು, ಪಿಎಂ ಸುರಕ್ಷಾ ವಿಮಾ ಯೋಜನೆಯಡಿ 2.60 ಕೋಟಿಗೂ ಹೆಚ್ಚಿ ನೋಂದಣಿಗಳಿವೆ.ಪಿಎಂ ಮುದ್ರಾ ಯೋಜನೆಯಡಿ 3.39 ಲಕ್ಷ ಕೋಟಿ ರೂ ಮೊತ್ತದ ಸಾಲ ವಿತರಣೆ ಮಾಡಲಾಗಿದೆ. ಅಟಲ್ ಅಟಲ್ ಪಿಂಚಣಿ ಯೋಜನೆಗೆ 48.9 ಲಕ್ಷ ಕ್ಕೂ ಹೆಚ್ಚು ಚಂದಾದಾರರು ಇದ್ದಾರೆ. ಪಿಎಂ ಸ್ವನಿಧಿಯಡಿ 6.14 ಲಕ್ಷಕ್ಕೂ ಅರ್ಜಿಗಳ ವಿತರಿಸಲಾಗಿದೆ. 31.7 ಲಕ್ಷಗೂ ಹೆಚ್ಚು ಕೆಸಿಸಿ ಕಾರ್ಡ್ ಗಳ ವಿತರಣೆ ಮಾಡಲಾಗಿದೆ.

ಜಲಜೀವನ್ ಮಿಷನ್ ನಡಿ 87.7 ಲಕ್ಷ ಕ್ಕೂ ಹೆಚ್ಚು ಗ್ರಾಮೀಣ ಮನೆಗಳಿಗೆನಲ್ಲಿ ನೀರು ಸಂಪರ್ಕ ಒದಗಿಸಲಾಗಿದೆ. ಪಿಎಂ ಉಜ್ವಲ ಯೋಜನೆಯಡಿ 41.4 ಲಕ್ಷಕ್ಕೂ ಹೆಚ್ಚು ಎಲ್ ಪಿ ಜಿ ಸಂಪರ್ಕಗಳನ್ನು ನೀಡಲಾಗಿದೆ. 1,610 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳನ್ನು ಕಾರ್ಯಾರಂಭ ಮಾಡಲಾಗಿದೆ. 1.89 ಕೋಟಿ ಗೂ ಹೆಚ್ಚು ಆಯುಷ್ಮಾನ್ ಕಾರ್ಡ್ ಗಳನ್ನು ಸೃಷ್ಟಿಸಲಾಗಿದೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 402 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ. ಪಿಎಂ ಕಿಸಾನ್ ನಡಿ 43.2 ಲಕ್ಷಕ್ಕೂ ಹೆಚ್ಚು ರೈತರಿಗೆ ನೆರವು ನೀಡಲಾಗಿದೆ ಎಂದು ತಿಳಿಸಲಾಗಿದೆ.

Previous Post

Udupi :ಸ್ಟೋರ್ ಕೀಪರ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ – ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2536365 ಸಂಪರ್ಕಿಸಿ.!

Next Post

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check