Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪೋಷಕರ ಬೈಗುಳಕ್ಕೆ ಮನೆಯಿಂದ ಹೊರಟ ಅಕ್ಕ-ತಮ್ಮಂದಿರು: ಉಚಿತ ಬಸ್‌ನಲ್ಲಿ ರಾಜ್ಯ ಸುತ್ತಾಟ, ಪೊಲೀಸರು ರಕ್ಷಣೆ…!!

Dhrishya News by Dhrishya News
04/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಪೋಷಕರ ಬೈಗುಳಕ್ಕೆ ಮನೆಯಿಂದ ಹೊರಟ ಅಕ್ಕ-ತಮ್ಮಂದಿರು: ಉಚಿತ ಬಸ್‌ನಲ್ಲಿ ರಾಜ್ಯ ಸುತ್ತಾಟ, ಪೊಲೀಸರು ರಕ್ಷಣೆ…!!
0
SHARES
38
VIEWS
Share on FacebookShare on Twitter

ಬೆಂಗಳೂರು, ಫೆ. 04: ಪೋಷಕರ ಬೈಗುಳದಿಂದ ಮನೆಯಿಂದ ಹೊರಟ ಬೆಂಗಳೂರು ಮೂಲದ ಅಕ್ಕ-ತಮ್ಮಂದಿರು ರಾಜ್ಯದ ಹಲವು ಭಾಗಗಳಲ್ಲಿ ಸುತ್ತಾಡಿದ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿ ಮಹಿಳೆಯರ ಉಚಿತ ಬಸ್ ಯೋಜನೆಯ ಪ್ರಯೋಜನ ಪಡೆದು ತಮ್ಮನೊಂದಿಗೆ ಪ್ರಯಾಣಿಸಿದ್ದು, ಮಕ್ಕಳು ಕಾಣೆಯಾಗಿದ್ದಾರೆ ಎಂಬ ಪೋಷಕರ ದೂರಿನ ಬಳಿಕ ಪೊಲೀಸರು ತಕ್ಷಣ ಶೋಧ ಕಾರ್ಯ ಕೈಗೊಂಡರು. ಸಿಸಿಟಿವಿ ದೃಶ್ಯಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಮಕ್ಕಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಲಾಯಿತು.

ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ ಮಕ್ಕಳು ಅಂತಿಮವಾಗಿ ಮರಳಿ ಹೆತ್ತವರ ಮಡಿಲು ಸೇರಿರುವ ಪ್ರಸಂಗ ನಡೆದಿದೆ.

ಹೌದು, ಹೆತ್ತವರು ಬೈದಿದ್ದಕ್ಕೆ ಕೋಪಗೊಂಡ ಮಕ್ಕಳು ಮನೆಬಿಟ್ಟು ತೆರಳಿದ್ದಾರೆ. ಆಧಾರ್ ಕಾರ್ಡ್ ಇರೋದ್ರಿಂದ ಸರ್ಕಾರಿ ಬಸ್​​ಗಳಲ್ಲಿ ಬಾಲಕಿಗೆ ಉಚಿತವಾಗಿ ಪ್ರಯಾಣಿಸಿದ್ದರೆ, ತಮ್ಮನಿಗೆ ಟಿಕೆಟ್​​ ಮಾಡದೆ ಕರೆದೊಯ್ದಿದ್ದಳು. ಇತ್ತ ಮಕ್ಕಳು ಕಾಣೆಯಾಗಿರುವ ಬಗ್ಗೆ ಆತಂಕಗೊಂಡ ಪೋಷಕರು ಅವರಿಗಾಗಿ ಹುಡುಕಾಡಿದ್ದಾರೆ. ಬಳಿಕ HAL ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಿಸಿದ್ದಾರೆ. ತಕ್ಷಣ ಅಲರ್ಟ್​​ ಆದ ಪೊಲೀಸರು ಈ ಬಗ್ಗೆ ರಾಜ್ಯಾದ್ಯಂತ ಪೊಲೀಸರಿಗೆ ಮಾಹಿತಿ ನೀಡುವ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿಯೂ ಮಕ್ಕಳ ಕುರಿತು ಮಾಹಿತಿ ಹಂಚಿಕೊಂಡಿದ್ದರು.

ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಿದಾಗ ಅಶ್ವತ್ಥನಗರ ಮನೆಯಿಂದ ಬ್ಯಾಗ್ ಹಿಡಿದು ಹೊರಟಿದ್ದ ಮಕ್ಕಳು ಮಾರತ್ತಹಳ್ಳಿ ಬ್ರಿಡ್ಜ್ ಸ್ಕೈ ವಾಕ್ ಹತ್ತಿ ಬಂದಿದ್ದಾರೆ. ಅಲ್ಲಿಂದ ಮೆಜೆಸ್ಟಿಕ್​​ಗೆ ಬಂದು ನೇರವಾಗಿ‌ ಶಿವಮೊಗ್ಗಗೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಹೀಗೆ ಬಸ್​​ ಹತ್ತಿಹೋದ ಇವರು ಭದ್ರವಾತಿಯಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದ ಸಂದೇಶ ನೋಡಿ ಪೊಲೀಸರಿಗೆ ಕರೆ ಬಂದಿದೆ. ಫೋಟೊದಲ್ಲಿರುವ ಮಕ್ಕಳ ರೀತಿಯಲ್ಲೇ ಕಾಣುವ ಇಬ್ಬರು ಇಲ್ಲಿದ್ದಾರೆಂಬ ಮಾಹಿತಿ ಸಿಕ್ಕ ಕಾರಣ ವಿಷಯವನ್ನು HAL ಪೊಲೀಸರು ಸ್ಥಳೀಯ ಠಾಣೆಗೆ ತಿಳಿಸಿದ್ದಾರೆ. ಅವರು ಮಕ್ಕಳನ್ನು ರಕ್ಷಿಸಿದ್ದು, ಭದ್ರಾವತಿತಿಂದ ಹೆಚ್ಎಎಲ್ ಠಾಣೆಗೆ ಮನೆಬಿಟ್ಟು ತೆರಳಿದ್ದ ಅಕ್ಕ ಮತ್ತು ತಮ್ಮನನ್ನು ಕರೆತರಲಾಗಿದೆ.

Previous Post

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ದಕ್ಷಿಣ ಕರ್ನಾಟಕದ ಮೊದಲ ಟ್ರಾನ್ಸ್‌ಕ್ಯಾಥೆಟರ್ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ ಯಶಸ್ವಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ದಕ್ಷಿಣ ಕರ್ನಾಟಕದ ಮೊದಲ ಟ್ರಾನ್ಸ್‌ಕ್ಯಾಥೆಟರ್ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ ಯಶಸ್ವಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ದಕ್ಷಿಣ ಕರ್ನಾಟಕದ ಮೊದಲ ಟ್ರಾನ್ಸ್‌ಕ್ಯಾಥೆಟರ್ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ ಯಶಸ್ವಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check