ಮಂಗಳೂರು ಫೆ. 05 : ನಗರದ ನಂತೂರು ಬಸ್ ನಿಲ್ದಾಣದ ಸಮೀಪ (ಫೆ. 4) ರಾತ್ರಿ ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಯುವತಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ದೀಪ್ತಿ (26) ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಸುಮಾರು 7:45ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕಿಶೋರ್ ಹಾಗೂ ದೀಪ್ತಿ ದ್ವಿಚಕ್ರ ವಾಹನದಲ್ಲಿ ಬಲ್ಲಾಳ್ ಭಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಇನ್ನೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಕಿಶೋರ್ ರಸ್ತೆಯ ಪಕ್ಕಕ್ಕೆ ಬಿದ್ದಿದ್ದರೆ, ದೀಪ್ತಿ ರಸ್ತೆಗೆ ಬಿದ್ದಿದ್ದಾರೆ ಈ ವೇಳೆ ಬಸ್ಸಿನ ಚಕ್ರದಡಿಗೆ ದೀಪ್ತಿ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ






