Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!

Dhrishya News by Dhrishya News
06/02/2026
in ಸುದ್ದಿಗಳು
0
ಬೇಸಗೆ ನೀರಿನ ಅಭಾವ ತಪ್ಪಿಸಲು ಮುನ್ನೆಚ್ಚರಿಕೆ: ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸೂಚನೆ…!!
0
SHARES
2
VIEWS
Share on FacebookShare on Twitter

ಉಡುಪಿ ಫೆ. 06:ಪ್ರಸಕ್ತ ಸಾಲಿನ ಬೇಸಗೆಯಲ್ಲಿ ನೀರಿನ ತೀವ್ರತೆ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪಂಚಾಯತ್‌ವು ಈಗಾಗಲೇ ಎಲ್ಲ ಗ್ರಾಮ ಪಂಚಾಯತ್‌ಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ರವಾನಿಸಿದೆ.

2025ರ ಮುಂಗಾರು ಪೂರ್ವ ಅವಧಿಯಾದ ಎಪ್ರಿಲ್–ಮೇ ತಿಂಗಳಲ್ಲಿ ಸಮರ್ಪಕ ಮಳೆಯಾಗಿದ್ದ ಪರಿಣಾಮ, ಕಳೆದ ಬೇಸಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರಲಿಲ್ಲ. ಆದರೆ ಉಪ್ಪುನೀರು ಪ್ರವೇಶ ಇರುವ ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ ಮಾತ್ರ ಎಲ್ಲ ಋತುವಿನಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ನಿರಂತರವಾಗಿ ಕಂಡುಬರುತ್ತಿರುವುದು ಗಮನಾರ್ಹವಾಗಿದೆ.

ಕೆಲವೊಂದು ಗ್ರಾಮ ಪಂಚಾಯತ್‌ಗಳಲ್ಲಿ ಬೇಸಗೆಯಲ್ಲಿ ನೀರಿನ ಅಭಾವ ಹೆಚ್ಚಿರುತ್ತದೆ. ಹೀಗಾಗಿ ಬೇಸಗೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಈಗಾಗಲೇ ಜಿಲ್ಲಾ ಪಂಚಾಯತ್‌ನಿಂದ ಸಿದ್ಧಪಡಿಸಿಕೊಳ್ಳಲಾಗಿದೆ. ಅದರಂತೆ ಮುಂದಿನ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವ ಆಗದಂತೆ ಈಗಿಂದಲೇ ಪರಿಪೂರ್ಣ ಕ್ರಮ ತೆಗೆದುಕೊಳ್ಳಲು ಗ್ರಾಮ ಪಂಚಾಯತ್‌ಗಳಿಗೆ ಸೂಚನೆ ನೀಡಲಾಗಿದೆ.

ಫೆಬ್ರವರಿ ಮೊದಲು ಅಥವಾ ಎರಡನೇ ವಾರದ ಒಳಗಾಗಿ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳ ಅಧಿಕಾರ ಅವಧಿ ಪೂರ್ಣಗೊಂಡು ಆಡಳಿತಾಧಿಕಾರಿಗಳ ಅಧಿಕಾರ ಆರಂಭವಾಗಲಿ. ಹೀಗಾಗಿ ಬಹುತೇಕ ಗ್ರಾಮ ಪಂಚಾಯತ್‌ಗಳಲ್ಲಿ ಈಗಾಗಲೇ ಜನಪ್ರತಿನಿಧಿಗಳ ಕೊನೆ ಸಾಮಾನ್ಯ ಸಭೆ ನಡೆದು ಮುಂದಿನ ಬೇಸಗೆಯಲ್ಲಿ ಎದುರಾಗ ಬಹುದಾದ ನೀರಿನ ಸಮಸ್ಯೆ ಸಹಿತ ವಿವಿಧ ರೀತಿಯ ಸಮಸ್ಯೆಗೆ ಪರಿಹಾರದಂತೆ ಅಗತ್ಯವಾಗಿರುವ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಇನ್ನೂ ಫಲ ಕೊಡದ ಜೆಜೆಎಂ

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲೂ ಜಲ್ ಜೀವನ್ ಮಿಷನ್ ಕಾಮಗಾರಿ ನಡೆದಿದೆ.ಕೆಲವು ಕಡೆಗಳಲ್ಲಿ ನಡೆಯುತ್ತಲೇ ಇದೆ. ಆದರೆ ಎಲ್ಲಿಯೂ ಪರಿಪೂರ್ಣವಾಗಿ ನೀರು ಪೂರೈಕೆ ಆಗುತ್ತಿಲ್ಲ. ಕೆಲವು ಗ್ರಾಪಂ.ಗಳಲ್ಲಿ ಮನೆ ಮನೆಗೆ ಅಳವಡಿಸಿರುವ ನಳ್ಳಿಗಳು ತುಕ್ಕು ಹಿಡಿದಿದೆ.ನಳ್ಳಿಯ ಕಟ್ಟೆ ದುರಾವಸ್ಥೆಯಾಗಿದೆ. ಕೋಟ್ಯಂತರ ರೂಪಾಯಿಗಳ ಜೆಜೆಎಂ ಕಾಮಗಾರಿ ಇನ್ನೂ ಫಲ ಕೊಟ್ಟಿಲ್ಲ.

ಪರ್ಯಾಯ ಮಾರ್ಗ

ಜೆಜೆಎಂ ಕಾಮಗಾರಿ ಪೂರ್ಣಗೊಂಡಿದ್ದು ಆ ಪೈಪ್ ಲೈನ್ ಗಳ ಮೂಲಕ ನೀರು ಪೂರೈಕೆ ಆಗದೆ ಇದ್ದಲ್ಲಿ ಹಳೆಯ ಪೈಪ್ ಲೈನ್ ಸಂಪರ್ಕವನ್ನೇ ಇದಕ್ಕೆ ಒದಗಿಸಿ ನೀರು ಪೂರೈಸಲು ಜಿ.ಪಂ. ಚಿಂತನೆ ನಡೆಸಿದೆ. ಅದರಂತೆ ಬೈಂದೂರು ತಾಲೂಕಿನ 9 ಗ್ರಾ.ಪಂ.ಗಳಿಗೆ ಈ ನಿಟ್ಟಿನಲ್ಲಿ ಸೂಚನೆಯನ್ನು ರವಾನೆ ಮಾಡಲಾಗಿದೆ.

ಗ್ರಾ.ಪಂ. ಗಳಿಗೆ ವಾರಾಹಿ ನೀರು

ಉಡುಪಿ ನಗರಕ್ಕೆ ಈಗಾಗಲೇ ವಾರಾಹಿ ನೀರು ಬರುತ್ತಿದೆ. ಅದೇ ಪೈಪ್‌ ಲೈನ್ ಮಾರ್ಗದ ಗ್ರಾಮ ಪಂಚಾಯತ್‌ಗಳಿಗೆ ನೀರು ಒದಗಿಸಲು ಕ್ರಮ ತೆಗೆದು ಕೊಳ್ಳಲಾಗಿದೆ. ಅದರಂತೆ ನೀಲಾವರ, ಕೊಕ್ಕರ್ಣೆ, ಕಳತ್ತೂರು ಸಂತೆಕಟ್ಟೆ, ಯಡ್ತಾಡಿ ಸಹಿತ ಹಲವು ಗ್ರಾ.ಪಂ. ಗಳಿಗೆ ಉಡುಪಿ ನಗರದ ವಾರಾಹಿ ಪೈಪ್ ಲೈನ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

ಮುಂದಿನ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಎಲ್ಲ ಗ್ರಾ.ಪಂ.ಗಳಿಗೂ ಈಗಾಗಲೇ ಸೂಚನೆ ನೀಡಲಾಗಿದೆ. ಜೆಜೆಎಂ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿ ಸುವುದು ಹಾಗೂ ಕೆಲವು ಗ್ರಾ.ಪಂ.ಗೆ ಹಳೆ ಪೈಪ್ ಲೈನ್ ನೀರಿನ ಮೂಲಗಳನ್ನೇ ಇದಕ್ಕೆ ಬಳಸಲು ಸೂಚಿಸಲಾಗಿದೆ. ವಾರಾಹಿ ಪೈಪ್ ಲೈನ್ ಮೂಲಕ ಕೆಲವು ಗ್ರಾ.ಪಂ.ಗೆ ನೀರು ಪೂರೈಕೆ ಮಾಡುತ್ತಿದ್ದೇವೆ.

ಡಾ|

ಉದಯ ಕುಮಾರ್‌ಶೆಟ್ಟಿ,

ಮುಖ್ಯ ಯೋಜನಾಧಿಕಾರಿ, ಜಿ.ಪಂ. ಉಡುಪಿ

Previous Post

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

Next Post

ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್…..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್…..!!

ತ್ಯಾಜ್ಯ ನೀರು ಸಂಸ್ಕರಣೆ: ಉಡುಪಿ ನಗರಸಭೆಯಿಂದ 376ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್.....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News