Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

Dhrishya News by Dhrishya News
09/02/2026
in Accident, ಸುದ್ದಿಗಳು
0
ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!
0
SHARES
10
VIEWS
Share on FacebookShare on Twitter

ತೀರ್ಥಹಳ್ಳಿ, ಫೆ. 09: ಭಾನುವಾರ ರಾತ್ರಿ ತಾಲೂಕಿನ ನಾಲೂರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಆಟೋದಲ್ಲಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದ ಸಮೀಪವಿರುವ ಪ್ರಸಿದ್ಧ ‘ಶಬರಿ ಹೋಟೆಲ್ ಮಾಲೀಕರಾದ ಸುದರ್ಶನ್ ಮತ್ತು ಅವರ ಕುಟುಂಬದವರು ಉಡುಪಿ ಜಿಲ್ಲೆಯ ಹೆಬ್ರಿ ಸಮೀಪವಿರುವ ತಮ್ಮ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ತೀರ್ಥಹಳ್ಳಿಗೆ ಆಟೋದಲ್ಲಿ ಬರುತ್ತಿದ್ದಾಗ, ನಾಲೂರು ಸಮೀಪದ ಅಪಾಯಕಾರಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಆಟೋದ ಬಲಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಅವರು ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆಟೋದಲ್ಲಿದ್ದ ಹೋಟೆಲ್ ಮಾಲೀಕ ಸುದರ್ಶನ್ (35) ಹಾಗೂ ಏಳು ವರ್ಷದ ಬಾಲಕ ಸಂಚಿತ್ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 ಅಪಘಾತಕ್ಕೆ ಕುರುವಳ್ಳಿಯ ಯಲ್ಲಪ್ಪ ಎಂಬ ಆಟೋ ಚಾಲಕನ ಬೇಜವಾಬ್ದಾರಿತನವೇ ಕಾರಣ ಎಂದು ಹೇಳಲಾಗಿದ್ದು, ಆತನ ವಿರುದ್ಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ…!!

Next Post

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check