Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Entertainment Sports

ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!

Dhrishya News by Dhrishya News
09/02/2026
in Sports, ಸುದ್ದಿಗಳು
0
ಭಾರತದ ವಿರುದ್ಧ ಪಂದ್ಯಕ್ಕೆ 3 ಬೇಡಿಕೆ ಇಟ್ಟ ಪಾಕಿಸ್ತಾನ್…!
0
SHARES
46
VIEWS
Share on FacebookShare on Twitter

India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಫೆಬ್ರವರಿ 15 ಕ್ಕೆ ನಿಗದಿಯಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂ ನಲ್ಲಿ ಜರುಗಲಿರುವ ಈ ಪಂದ್ಯದಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಇದೀಗ ಮೂರು ಭೇಡಿಕೆಗಳೊಂದಿಗೆ ಐಸಿಸಿ ಜೊತೆ ಪಿಸಿಬಿ ಮಾತುಕತೆ ಮುಂದುವರೆಸಿದೆ.

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ.

ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆ ಬೇಡಿಕೆಗಳಾವುವು ಎಂದು ನೋಡುವುದಾದರೆ…

ಆದಾಯ ಹೆಚ್ಚಳ: ಐಸಿಸಿಯಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯವನ್ನು ಹೆಚ್ಚಿಸಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ. ಈ ಬೇಡಿಕೆಗೆ ಸಮ್ಮತಿಸುವುದಾದರೆ ಮಾತ್ರ ಭಾರತದ ವಿರುದ್ಧ ಕಣಕ್ಕಿಳಿಯುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ದ್ವಿಪಕ್ಷೀಯ ಸರಣಿ: ಭಾರತ ಮತ್ತು ಪಾಕಿಸ್ತಾನ್ ನಡುವಣ ದ್ವಿಪಕ್ಷೀಯ ಸರಣಿಯನ್ನು ಮತ್ತೆ ಆರಂಭಿಸಬೇಕೆಂದು ಪಿಸಿಬಿ ಆಗ್ರಹಿಸಿದೆ. ಇದಕ್ಕಾಗಿ ಐಸಿಸಿ ಮುಖ್ಯ ಪಾತ್ರವಹಿಸಬೇಕು. ಈ ಮೂಲಕ ಭಾರತ ಮತ್ತು ಪಾಕಿಸ್ತಾನ್ ನಡುವಣ ಸರಣಿಯನ್ನು ಪುನಃಸ್ಥಾಪಿಸುವ ಭರವಸೆ ನೀಡಬೇಕೆಂದು ಪಿಸಿಬಿ ಆಗ್ರಹಿಸಿದೆ.

ಹ್ಯಾಂಡ್​ಶೇಕ್: ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು. ಪಂದ್ಯಗಳ ವೇಳೆ ಹ್ಯಾಂಡ್​ಶೇಕ್ ಪ್ರೋಟೋಕಾಲ್​ ಜಾರಿ ಮಾಡಬೇಕು. ಈ ಪ್ರೊಟೋಕಾಲ್​ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಹ್ಯಾಂಡ್​ಶೇಕ್ ಮಾಡುವುದನ್ನು ಕಡ್ಡಾಯ ಮಾಡಬೇಕೆಂದು ಪಿಸಿಬಿ ಬೇಡಿಕೆಯಿಟ್ಟಿದೆ.

ಸದ್ಯ ಈ ಮೂರು ಬೇಡಿಕೆಗಳೊಂದಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಅಧಿಕಾರಿಗಳ ನಡುವೆ ಚರ್ಚೆ ಮುಂದುವರೆದಿದೆ. ಅಲ್ಲದೆ ಇಂದು (ಫೆ.9) ಐಸಿಸಿ-ಪಿಸಿಬಿ ಅಧಿಕಾರಿಗಳ ನಡುವೆ ಲಾಹೋರ್​ನಲ್ಲಿ ಈ ಕುರಿತಾದ ವಿಶೇಷ ಸಭೆ ನಡೆಯಲಿದ್ದು, ಈ ವೇಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುತ್ತಿರುವುದೇಕೆ?

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಖಂಡಿಸಿದೆ. ಇದೇ ಕಾರಣಕ್ಕೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಅದರಂತೆ ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡ ಕಣಕ್ಕಿಳಿಯುವುದಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ಹೊಡೆತ ಬೀಳಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದಾರೆ.

Previous Post

ಆಟೋ ಚಾಲಕನ ನಿರ್ಲಕ್ಷ್ಯ; ಡಿವೈಡರ್‌ಗೆ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು….!!

Next Post

ಉಡುಪಿಯಲ್ಲಿ ಚಿರತೆ ಭೀತಿ ಹೆಚ್ಚಳ; ಕಾಂಪೌಂಡ್ ಏರಿ ಕುಳಿತ ಚಿರತೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಚಿರತೆ ಭೀತಿ ಹೆಚ್ಚಳ; ಕಾಂಪೌಂಡ್ ಏರಿ ಕುಳಿತ ಚಿರತೆ…!!

ಉಡುಪಿಯಲ್ಲಿ ಚಿರತೆ ಭೀತಿ ಹೆಚ್ಚಳ; ಕಾಂಪೌಂಡ್ ಏರಿ ಕುಳಿತ ಚಿರತೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026

Recent News

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved