ಕಾಸರಗೋಡು, ಫೆ. 11 : ಕಾರಿನಲ್ಲಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂಗಾನ ಮೂಲದ ಮುಹಮ್ಮದ್ ರಫೀಕ್ ಬಿ. (39) ಬಂಧಿತನಾಗಿ ಗುರುತಿಸಲಾಗಿದೆ.
ವಿದ್ಯಾನಗರ ಸರಕಾರಿ ಕಾಲೇಜು ಸಮೀಪ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದ ಕಾರೊಂದು ಪೊಲೀಸರ ಸೂಚನೆಗೆ ಲೆಕ್ಕಿಸದೆ ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಬೆನ್ನಟ್ಟಿದ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಲಕ್ಷಾಂತರ ರೂ. ಮೌಲ್ಯದ ಸುಮಾರು 50 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.
ಬಂಧಿತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.







