ಸುಳ್ಯ, ಫೆ. 11:ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಂಗಳವಾರ ದಾಳಿ ನಡೆಸಿದರು.
ಸೂಕ್ತ ಅನುಮತಿ ಇಲ್ಲದೆ ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಲಾಗಿತ್ತು. ಇದಕ್ಕಾಗಿ ಕಬ್ಬಿಣದ ಬೇಲಿಯನ್ನು ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಅಲ್ಲಿ ಸೇರಿದ್ದವರು ಓಡಿ ಪರಾರಿಯಾದರು. ಕೋಳಿ ಅಂಕಕ್ಕಾಗಿ ಅಳವಡಿಸಲಾಗಿದ್ದ ಕಬ್ಬಿಣದ ಬೇಲಿಯನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ







