Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

Dhrishya News by Dhrishya News
11/02/2026
in ಕರಾವಳಿ
0
ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!
0
SHARES
4
VIEWS
Share on FacebookShare on Twitter

ಕಾರ್ಕಳ:ಫೆಬ್ರವರಿ 11: ಮಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಿವು ಕೇಂದ್ರದ ವತಿಯಿಂದ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಾಳ ಇಲ್ಲಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಆಚಾರ್ಯ, ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ, ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಪೂಜಾರಿ, ಅರಿವು ಕೇಂದ್ರದ ಸಲಹಾ ಸಮಿತಿಯ ಸದಸ್ಯ ಹಾಗೂ ಹಿರಿಯರಾದ ಶ್ರೀರಂಗ ಜೋಶಿ, ಸಮೂಹ ಸಂಪನ್ಮೂಲ ವ್ಯಕ್ತಿ ಕೃಷ್ಣಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸ್ಪರ್ಧೆಗಳು ಮೂರು ವಿಭಾಗಗಳಲ್ಲಿ ನಡೆದಿದ್ದು, ಪ್ರಾಥಮಿಕ ಶಾಲಾ ಮಕ್ಕಳು, ಪ್ರೌಢಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗಾಗಿ ದೇಶಭಕ್ತಿ ಗೀತೆ, ಭಕ್ತಿ ಗೀತೆ, ಜನಪದ ಗೀತೆ ಮತ್ತು ಭಾವಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಿಂದ ಸುಮಾರು 116 ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಾರ್ವಜನಿಕ ವಿಭಾಗದಲ್ಲಿ ಸುಮಾರು 20 ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಅರಿವು ಕೇಂದ್ರಕ್ಕೆ ನಿರಂತರವಾಗಿ ಭೇಟಿ ನೀಡಿ ಉತ್ತಮ ಓದುಗಾರರಾಗಿ ಗುರುತಿಸಿಕೊಂಡ ಕೆ.ಎಸ್. ವೆಂಕಟೇಶ್ ಅವರನ್ನು ಈ ಸಂದರ್ಭ ಗೌರವಿಸಲಾಯಿತು. ಬಹುಮಾನದ ವಿಜೇತರ ಪಟ್ಟಿಯನ್ನು ಪಂಚಾಯತ್ ಕಾರ್ಯದರ್ಶಿ ಸವಿತ ಕುಮಾರಿ ವಾಚಿಸಿದರು. ಕಾರ್ಯಕ್ರಮದ ಯಶಸ್ಸಿಗೆ ವಸಂತಿ ಹಾಗೂ ಪಂಚಾಯತ್‌ನ ಎಲ್ಲಾ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಸುಧೀರ್ ಶೆಟ್ಟಿ ನಡೆಸಿ, ಗ್ರಂಥಪಾಲಕಿ ಗೀತಾ ಸೇರಿಗಾರ್ ವಂದನಾರ್ಪಣೆಗೈದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ವಿವಿಧ ಹೂಗಳ ಗಿಡಗಳನ್ನು ನೀಡಲಾಯಿತು.

Previous Post

ನಂದಿನಿ ಉತ್ಪನ್ನಗಳ ಅಂಬಾಸಿಡರ್ ಆಗಿ ನಟಿ ಸುಧಾರಾಣಿ ನೇಮಕ…!

Next Post

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check