Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ

Dhrishya News by Dhrishya News
11/02/2026
in मौसम
0
ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ, ಕಾರ್ಕಳದಲ್ಲಿ ಉಚಿತ ಮೊಣಕಾಲು ಮತ್ತು ಸೊಂಟದ ಕೀಲು ಆರೋಗ್ಯ ತಪಾಸಣಾ ಶಿಬಿರ
0
SHARES
22
VIEWS
Share on FacebookShare on Twitter

ಕಾರ್ಕಳ , 11 ಫೆಬ್ರವರಿ 2026:ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಶುಕ್ರವಾರ, 13 ಫೆಬ್ರವರಿ 2026 ರಂದು ಉಚಿತವಾಗಿ ಮೊಣಕಾಲು ಮತ್ತು ಸೊಂಟದ ಕೀಲುಗಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ, ಶಿಬಿರವು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ಆಸ್ಪತ್ರೆ ಆವರಣದಲ್ಲಿ ನಡೆಯಲಿದ್ದು, ಮೊಣಕಾಲು ಮತ್ತು ಸೊಂಟದ ಅಸ್ವಸ್ಥತೆಗಳು ಮತ್ತು ಗಂಟು ಹಾಗೂ ಕೀಲು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಆರಂಭಿಕ ರೋಗನಿರ್ಣಯ ಮತ್ತು ತಜ್ಞರ ಮಾರ್ಗದರ್ಶನವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಮೊಣಕಾಲು ಅಥವಾ ಸೊಂಟ ನೋವು, ನಡೆಯಲು ಅಥವಾ ಮೆಟ್ಟಿಲು ಹತ್ತುವಲ್ಲಿ ತೊಂದರೆ, ಕೀಲು ಬಿಗಿತ, ಅಸ್ಥಿಸಂಧಿವಾತ, ದೀರ್ಘಕಾಲದ ಗಂಟು ನೋವು ಮತ್ತು ಸೀಮಿತ ಚಲನೆ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಈ ಶಿಬಿರವು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.

ಸೊಂಟ ಮತ್ತು ಮೊಣಕಾಲು ಬದಲಿ ಸಮಾಲೋಚಕ ಡಾ.ಅರವಿಂದ್ ಶಾನಭಾಗ್ ಅವರ ನೇತೃತ್ವದಲ್ಲಿ ಶಿಬಿರವು ಜರಗಲಿದ್ದು, ಅವರು ಸೊಂಟ ಮತ್ತು ಮೊಣಕಾಲು ಬದಲಿ (ಅರ್ಥ್ರೋ ಪ್ಲಾಸ್ಟಿ)ವಿಧಾನಗಳ ಬಗ್ಗೆ ತಜ್ಞ ಮಾರ್ಗದರ್ಶನವನ್ನು ನೀಡಲಿದ್ದಾರೆ. ಉಚಿತ ಸಮಾಲೋಚನೆಯ ಜೊತೆಗೆ, ಅಗತ್ಯವಿದ್ದಲ್ಲಿ ಭಾಗವಹಿಸುವವರಿಗೆ ರಿಯಾಯಿತಿ ದರದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಈ ಉಪಕ್ರಮದ ಕುರಿತು ಮಾತನಾಡಿದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ, “ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ನಮ್ಮ ಗಮನವು ಸಮುದಾಯ ಆಧಾರಿತ ಆರೋಗ್ಯ ರಕ್ಷಣೆಯ ಮೇಲೆ ಕೇಂದ್ರೀಕೃತವಾಗಿದ್ದು ಕೀಲು ಮತ್ತು ಗಂಟು ನೋವುಗಳ ಕುರಿತು ಆರಂಭಿಕ ರೋಗನಿರ್ಣಯ ಮತ್ತು ಮೂಳೆಚಿಕಿತ್ಸಾ ತಜ್ಞರ ಸೇವೆಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.

 

ನೋಂದಣಿಯು ಸೀಮಿತವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಸಹಾಯವಾಣಿ 9731601150/08258-230583 ಅನ್ನು ಸಂಪರ್ಕಿಸಬಹುದು.

Previous Post

ಮಾಳ ಅರಿವು ಕೇಂದ್ರದ ವತಿಯಿಂದ  ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ..!

Next Post

ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ…!!

ಬಾವಿಗೆ ಹಾರಿ ಬಸ್ ಏಜೆಂಟ್ ಆತ್ಮಹತ್ಯೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026
imunify-bot-check