Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

Dhrishya News by Dhrishya News
13/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅
0
SHARES
37
VIEWS
Share on FacebookShare on Twitter

ಬೆಂಗಳೂರು, ಫೆ. 13: ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿರುವ ವ್ಯವಸ್ಥೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನುಮುಂದೆ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬದಲಾಗಿ ಈ ಸ್ಮಾರ್ಟ್‌ ಕಾರ್ಡ್ ಬಳಕೆಯಾಗಲಿದೆ.

ಇದರ ಜೊತೆಗೆ, ಸಚಿವ ಸಂಪುಟವು ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೆಂಗಳೂರಿನ ರೇಸ್‌ ಕೋರ್ಸ್‌ ಅನ್ನು ಕುಣಿಗಲ್‌ಗೆ ಸ್ಥಳಾಂತರಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಶೂ ಹಾಗೂ ಸಾಕ್ಸ್ ವಿತರಣೆಗೂ ಗ್ರೀನ್‌ ಸಿಗ್ನಲ್‌ ದೊರೆತಿದೆ. ಅಲ್ಲದೆ, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಮಂಜೂರು ನೀಡಲಾಗಿದೆ.

ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು ಸ್ಮಾರ್ಟ್​ಕಾರ್ಡ್ ವಿತರಿಸಲಿವೆ. ಶಕ್ತಿ ಸ್ಮಾರ್ಟ್​ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ, ಆಧಾರ್ ಕಾರ್ಡ್‌ ತೋರಿಸಿ ಉಚಿತವಾಗಿ ಪ್ರಯಾಣಿಸುವುದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

ರೇಸ್​ಕೋರ್ಸ್ ಬೆಂಗಳೂರಿನಿಂದ ಕುಣಿಗಲ್​ಗೆ ಶಿಫ್ಟ್

ಬೆಂಗಳೂರಿನ ಪ್ರಸಿದ್ಧ ಸ್ಥಳಗಳಲ್ಲಿ ಒಂದಾದ ರೇಸ್ ಕೋರ್ಸ್ ಅಥವಾ ಟರ್ಫ್ ಕ್ಲಬ್​ ಸ್ಥಳಾಂತರಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್‌ ಫಾರ್ಮ್‌ಗೆ ಟರ್ಫ್ ಕ್ಲಬ್ ಶಿಫ್ಟ್ ಆಗಲಿದೆ. ಕ್ಲಬ್ ಜಾಗವನ್ನು ಹಾಗೇ ಉಳಿಸಿಕೊಳ್ಳಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಲೀಸ್ ಅವಧಿ ಮುಕ್ತಾಯ, ಬಾಡಿಗೆಯೂ ಪರಿಷ್ಕರಣೆ ಆಗಿರಲಿಲ್ಲ. ಹೀಗಾಗಿ ಬೆಂಗಳೂರಿನಿಂದ ರೇಸ್ ಕೋರ್ಸ್ ಸ್ಥಳಾಂತರ ಮಾಡಲಿದ್ದಾರೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಶೂ, 2 ಜೊತೆ ಸಾಕ್ಸ್

ಅಲ್ಲದೇ, ಸರ್ಕಾರಿ ಶಾಲೆಗಳಲ್ಲಿ 1-10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ, 2 ಜೊತೆ ಸಾಕ್ಸ್ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ವಿದ್ಯಾವಿಕಾಸ ಯೋಜನೆಯ ಅಡಿ 2026-27 ನೇ ಸಾಲಿಗೆ ಉಚಿತ ಶೂ, ಸಾಕ್ಸ್ ನೀಡಲು ನಿರ್ಧರಿಸಲಾಗಿದೆ.

ಕ್ಯಾಬಿನೆಟ್​ನಲ್ಲಿ ಕೈಗೊಂಡ ಇತರ ನಿರ್ಧಾರಗಳು

ಶಿಷ್ಟಾಚಾರ ನಿಯಮಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಅಂದರೆ, ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿಯಮ ಜಾರಿಗೆ ತರಲಾಗಿದೆ. ನ್ಯಾಯಾಲಯಗಳ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೆ ಅನುಮೋದನೆ ನೀಡಲಾಗಿದೆ. ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಬೆಡ್ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವುದು, 1777 ಎಕರೆ ಭೂಮಿ ‘ಶಾಶ್ವತ ವಿಶೇಷ’ ಕೃಷಿವಲಯ ಎಂದು ಘೋಷಿಸಲಾಗಿದೆ. ಇದರಲ್ಲಿ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನು ಶಾಶ್ವತ ವಿಶೇಷ ಕೃಷಿವಲಯ ಆಗಿರಲಿದೆ. ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ನಿರ್ಮಾಣಕ್ಕೆ

ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ SIR ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದೆ. ಕೆಲವು ಕಡೆ ಯಾವ ರೀತಿಯಲ್ಲಿ ಏನ್ ಮಾಡ್ತಿದ್ದಾರೆ ಅದೆಲ್ಲದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಕಾನೂನು ಇಲಾಖೆ ಸಮಗ್ರವಾಗಿಯೇ ಅಧ್ಯಯನ ಮಾಡಿ ಮತ್ತೆ ಸಂಪುಟದಲ್ಲಿ ಚರ್ಚೆ ನಡೆಸುವ ಬಗ್ಗೆ ನಿರ್ಧಾರ ಮಾಡಲಾಗಿದೆ.

Previous Post

ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿ ಹುದ್ದೆಗಳಿಗೆ ಉದ್ಯೋಗಾವಕಾಶ..!

Next Post

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

18/09/2026
ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

18/09/2026

Recent News

imunify-bot-check