Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!

Dhrishya News by Dhrishya News
13/02/2026
in ಕರಾವಳಿ, ಸುದ್ದಿಗಳು
0
ಪೊಲೀಸರಿಗೆ ನಿಂದನೆ: ದೂರು ನೀಡಲು ಹೋದ ವ್ಯಕ್ತಿಗೆ 14 ದಿನಗಳ ನ್ಯಾಯಾಂಗ ಬಂಧನ…!
0
SHARES
24
VIEWS
Share on FacebookShare on Twitter

ಮಂಗಳೂರು ಫೆಬ್ರವರಿ 13: ನೆರೆಹೊರೆಯವರ ವಿರುದ್ಧ ಸಣ್ಣ ವಿಷಯಕ್ಕೆ ದೂರು ನೀಡಲು ಠಾಣೆಗೆ ತೆರಳಿದ್ದ ವ್ಯಕ್ತಿಯೇ ಕೊನೆಗೆ ಜೈಲು ಪಾಲಾದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತನನ್ನು ಮಂಗಳೂರಿನ ಲ್ಯಾಂಡ್‌ ಲಿಂಕ್ಸ್ ನಿವಾಸಿ ಮಂಜಪ್ಪ ಸುರೇಂದ್ರನ್ ಎಂದು ಗುರುತಿಸಲಾಗಿದೆ.

ಮನೆಯ ಅಂಗಳದಲ್ಲಿ ಶಟಲ್ ಆಡುತ್ತಿದ್ದ ಯುವಕರ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಮತ್ತೆ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು ಪೊಲೀಸ್ ಠಾಣೆಗೆ ಹೋದವರು ಅಲ್ಲಿ ಪೊಲೀಸರಿಗೆ ನಿಂಧಿಸಿದ್ದಾನೆ. ಈ ಹಿನ್ನಲೆ ಮಂಜಪ್ಪ ಸುರೇಂದ್ರನ್ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ಮಂಗಳೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಘಟನೆ ನಡೆದಿರುವುದು ಮಂಗಳೂರಿನ ಲ್ಯಾಂಡ್‌ ಲಿಂಕ್ಸ್‌ ಗ್ರೀನ್‌ ಪಾರ್ಕ್‌ನಲ್ಲಿ. ಸಂಜೆ ಹೊತ್ತು ಯುವಕರು ತಮ್ಮ ಪಾಡಿಗೆ ಶಟಲ್ ಆಡುತ್ತಿದ್ದಾಗ, ತನಗೆ ನಿದ್ರೆ ಮಾಡಲು ತೊಂದರೆ ಆಗುತ್ತಿದೆ ಎಂದು ಬೊಬ್ಬೆ ಹಾಕಿ ಪತ್ನಿಯ ಜೊತೆಗೆ ಕಾವೂರು ಪೊಲೀಸ್ ಠಾಣೆಗೆ ಧಾವಿಸಿದ್ದರು. ಅಲ್ಲಿ ತನ್ನ ದೂರನ್ನು ದಾಖಲಿಸಬೇಕು, ದೂರನ್ನು ಸ್ವೀಕರಿಸದಿದ್ದರೆ ಪೊಲೀಸ್ ಕಮಿಷನರ್‌ ಅವರ ಬಳಿ ಹೋಗುವೆ ಎಂದು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ. ಆತನ ಕುಡಿತದ ಮತ್ತಿನಲ್ಲಿ ಇರುವುದನ್ನು ಪೊಲೀಸರು ಗಮನಿಸಿದ್ದಾರೆ.

ಪೊಲೀಸರು ಬಳಿಕ ಮಂಜಪ್ಪ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆತನ ಪತ್ನಿಯನ್ನು ಪೊಲೀಸ್ ಜೀಪಿನಲ್ಲಿ ಮನೆಗೆ ಸುರಕ್ಷಿತವಾಗಿ ಮನೆಗೆ ಬಿಟ್ಟಿರುತ್ತಾರೆ. ಈ ಮಧ್ಯೆ, ವಶದಲ್ಲಿ ಇದ್ದ ಆರೋಪಿ ಮಂಜಪ್ಪ ಸುರೇಂದ್ರನ್ ಪೊಲೀಸರಿಗೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. “ನೀವು ಹಣ ಕೊಟ್ಟು ಪೊಲೀಸ್ ಇಲಾಖೆಗೆ ಸೇರಿದ್ದೀರಿ, ನಿಮ್ಮನ್ನು ಇಲಾಖೆಯಲ್ಲಿ ಇಲ್ಲದಂತೆ ಮಾಡುವೆ” ಎಂದು ಸಿಬ್ಬಂದಿಯನ್ನೇ ನಿಂದಿಸಿದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ನೆರಕರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತ ಜೈಲು ಪಾಲಾಗಿದ್ದಾನೆ.

Previous Post

ಮಹಿಳೆಯರ ಉಚಿತ ಬಸ್ ಪ್ರಯಾಣ ವ್ಯವಸ್ಥೆಯಲ್ಲಿ ಬದಲಾವಣೆ: ಆಧಾರ್ ಬದಲಿಗೆ ಸ್ಮಾರ್ಟ್‌ ಕಾರ್ಡ್ ✅

Next Post

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

ಮಜೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಹಸ್ತಾಂತರ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News