Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!

Dhrishya News by Dhrishya News
15/02/2026
in ಕರಾವಳಿ
0
ಮಂಗಳೂರು : ಪಂಪ್‌ವೆಲ್–ಕರಾವಳಿ ಚತುಷ್ಪಥ ಅಭಿವೃದ್ಧಿ: ಇಂದಿನಿಂದ (ಫೆ.15) ಟ್ರಾಫಿಕ್ ಡೈವರ್ಷನ್..!!
0
SHARES
9
VIEWS
Share on FacebookShare on Twitter

ಮಂಗಳೂರು: ನಗರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಪಂಪ್‌ವೆಲ್ ಸರ್ಕಲ್‌ನಿಂದ ಕರಾವಳಿ ಜಂಕ್ಷನ್‌ವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಫೆಬ್ರವರಿ 15ರಿಂದ ಜೂನ್ 15ರವರೆಗೆ ನಾಲ್ಕು ತಿಂಗಳ ಕಾಲ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಅನುಗುಣವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಜಾರಿಗೊಳಿಸಿದ್ದಾರೆ.

ಏಕಮುಖ ರಸ್ತೆ ವ್ಯವಸ್ಥೆ

ಪಂಪ್‌ವೆಲ್ ವೃತ್ತದಿಂದ ಕಂಕನಾಡಿ ಹಳೆ ರಸ್ತೆ ಮೂಲಕ ಕಂಕನಾಡಿ ಜಂಕ್ಷನ್‌ಗೆ (ನಗರ ಪ್ರವೇಶ) ಹಾಗೂ ಕರಾವಳಿ ಜಂಕ್ಷನ್‌ನಿಂದ ಪಂಪ್‌ವೆಲ್ ವೃತ್ತದವರೆಗೆ (ನಗರ ನಿರ್ಗಮನ) ಇರುವ ಬೈಪಾಸ್ ರಸ್ತೆಗಳನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಮಾರ್ಗಗಳಲ್ಲಿ ವಾಹನ ದಟ್ಟಣೆ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಪರ್ಯಾಯ ಮಾರ್ಗಗಳ ವಿವರ

ಪಂಪ್‌ವೆಲ್ ಜಂಕ್ಷನ್‌ನಿಂದ ಕರಾವಳಿ ಜಂಕ್ಷನ್‌ಗೆ ನೇರ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳು ಕಂಕನಾಡಿ ಹಳೆ ರಸ್ತೆ ಮೂಲಕ ಸಂಚರಿಸಬೇಕು.

ತಲಪಾಡಿ ಹಾಗೂ ತೊಕ್ಕೊಟ್ಟು ಕಡೆಯಿಂದ ನಗರ ಪ್ರವೇಶಿಸುವ ವಾಹನಗಳು ಮಹಾಕಾಳಿಪಡ್ಪು, ಮಾರ್ಗನ್ಸ್ ಗೇಟ್, ಕೋಟಿಚೆನ್ನಯ ಸರ್ಕಲ್ ಅಥವಾ ಮಂಗಳಾದೇವಿ ಮುಖಾಂತರ ಸಂಚರಿಸಬಹುದು.

ಬಿ.ಸಿ. ರೋಡ್ ಕಡೆಯಿಂದ ಬರುವ ಭಾರಿ ವಾಹನಗಳು, ಇತರೆ ವಾಹನಗಳು ಹಾಗೂ ಲಾಲ್‌ಬಾಗ್ ಬಸ್ ನಿಲ್ದಾಣಕ್ಕೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸುಗಳು ಪಡೀಲ್ ಜಂಕ್ಷನ್‌ನಿಂದ ನಂತೂರು ಕಡೆಗೆ ಸಾಗಬೇಕು.

ಕೇರಳ ಹಾಗೂ ಕಾಸರಗೋಡು ಕಡೆಯಿಂದ ಕರಾವಳಿ ಕಡೆಗೆ ಬರುವ ಭಾರಿ ವಾಹನಗಳು ಮತ್ತು ಕೆಎಸ್ಸಾರ್ಟಿಸಿ ಬಸ್ಸುಗಳು ಪಂಪ್‌ವೆಲ್ ಜಂಕ್ಷನ್‌ನಿಂದ ನಂತೂರು ಮಾರ್ಗವಾಗಿ ಸಂಚರಿಸಬೇಕು.

ನಗರದ ಒಳಭಾಗದಿಂದ ಕರಾವಳಿ ಜಂಕ್ಷನ್ ಮೂಲಕ ಪಂಪ್‌ವೆಲ್ ಕಡೆಗೆ ಸಾಗುವ ವಾಹನಗಳಿಗೆ ಯಾವುದೇ ಬದಲಾವಣೆ ಇಲ್ಲ.

ವಾಹನ ನಿಲುಗಡೆ ನಿಷೇಧ

ಕಂಕನಾಡಿ ಜಂಕ್ಷನ್–ಪಂಪ್‌ವೆಲ್ ರಸ್ತೆ (ಕಂಕನಾಡಿ ಓಲ್ಡ್ ರಸ್ತೆ), ಕರಾವಳಿ–ಕಂಕನಾಡಿ ರಸ್ತೆ, ಕಂಕನಾಡಿ–ಫಳ್ನೀರ್ ಹೈಲ್ಯಾಂಡ್ ಆಸ್ಪತ್ರೆ ರಸ್ತೆ, ಕರಾವಳಿ–ಬಲ್ಮಠ ರಸ್ತೆ ಹಾಗೂ ಕಂಕನಾಡಿ ಬೈಪಾಸ್ ರಸ್ತೆಯ ಎರಡೂ ಬದಿಗಳಲ್ಲೂ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.

ಸಾರ್ವಜನಿಕರು ಸಹಕರಿಸಿ, ಸೂಚಿಸಿದ ಮಾರ್ಗಗಳನ್ನು ಅನುಸರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Previous Post

ಆಸರೆ” ಯೋಜನೆಯಡಿ ನಿರ್ಮಿಸಲಾದ 8 ಸುಸಜ್ಜಿತ ಮನೆಗಳ ಗೃಹಪ್ರವೇಶ ಮತ್ತು ಹಸ್ತಾಂತರ ಕಾರ್ಯಕ್ರಮ..!!

Next Post

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

ಉಡುಪಿ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮಕ್ಕೆ ಚಾಲನೆ..!

01/08/2026
ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

ಉಡುಪಿ: ಬಸ್‌ ಡಿಕ್ಕಿ – ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ದುರ್ಮರಣ..!

01/08/2026
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026

Recent News