Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆಗೆ ಕಟ್ಟುನಿಟ್ಟಿನ ಸಿದ್ಧತೆ: ಗೊಂದಲಕ್ಕೆ ಅವಕಾಶ ಕೊಡಬೇಡಿ – ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ…..!

Dhrishya News by Dhrishya News
18/02/2026
in ಕರಾವಳಿ, ಸುದ್ದಿಗಳು
0
ದ್ವಿತೀಯ ಪಿಯುಸಿ ಪರೀಕ್ಷೆಗೆ ಕಟ್ಟುನಿಟ್ಟಿನ ಸಿದ್ಧತೆ: ಗೊಂದಲಕ್ಕೆ ಅವಕಾಶ ಕೊಡಬೇಡಿ – ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ…..!
0
SHARES
7
VIEWS
Share on FacebookShare on Twitter

ಉಡುಪಿ, ಫೆ. 18: ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲ ಉಂಟಾಗದಂತೆ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರವೇಶ ಪತ್ರ ಕಡ್ಡಾಯವಾಗಿದ್ದು ಅದನ್ನು ತೋರಿಸಿದ ಬಳಿಕವೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಪ್ರವೇಶ ನೀಡಬೇಕು ಎಂದರು. ಪರೀಕ್ಷಾ ದಿನಗಳಲ್ಲಿ ಮೊಬೈಲ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಸಂಪೂರ್ಣ ನಿಷೇಧಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವಾಗಿ ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್, ಸೈಬರ್ ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕೆ ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಬೇಕು. ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದ್ದು, ಖಜಾನೆಯಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಸಂಗ್ರಹಣೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ವೆಬ್‌ಕಾಸ್ಟಿಂಗ್ ವ್ಯವಸ್ಥೆ ಹಾಗೂ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಬೆಳಕು, ಫ್ಯಾನ್, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು. ವೈದ್ಯಕೀಯ ತುರ್ತು ಪರಿಸ್ಥಿತಿಗೆ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ, ಡಿಡಿಪಿಯು ಮಾರುತಿ, ತಹಶೀಲ್ದಾರರು ಉಪಸ್ಥಿತರಿದ್ದರು. ಸಭೆಗೆ ಮುನ್ನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

‘17181 ವಿದ್ಯಾರ್ಥಿಗಳ ನೋಂದಣಿ’

ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 17,181 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 16,657 ಹೊಸ ವಿದ್ಯಾರ್ಥಿಗಳು, 383 ಖಾಸಗಿ ಅಭ್ಯರ್ಥಿಗಳು, 135 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 6 ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ ಬರೆಯುವವರು ಇದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಸ್ವರೂಪಾ ಟಿ.ಕೆ. ಎಚ್ಚರಿಕೆ ನೀಡಿದರು.

Previous Post

ಫೆ.19ರಿಂದ ‘ಸುರಭಿ ಜೈಸಿರಿ 2026’: ಉಮಾಶ್ರೀಗೆ ಸುರಭಿ ಬಿಂದುಶ್ರೀ ಗೌರವ…!

Next Post

ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ….!

ಶಿಪ್‌ಯಾರ್ಡ್ ರಹಸ್ಯ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

18/02/2026
ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

18/02/2026
ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

18/02/2026
ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

18/02/2026

Recent News

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

18/02/2026
ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

18/02/2026
ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

18/02/2026
ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

18/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved