Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಗೈರುಹಾಜರಿಗೆ ‘ವೇತನವಿಲ್ಲ’ ಫೆ.19 ‘ಬೆಂಗಳೂರು ಚಲೋ’: ಸಾರಿಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ಆದೇಶ…!

Dhrishya News by Dhrishya News
18/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಗೈರುಹಾಜರಿಗೆ ‘ವೇತನವಿಲ್ಲ’  ಫೆ.19 ‘ಬೆಂಗಳೂರು ಚಲೋ’: ಸಾರಿಗೆ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗಲು ಆದೇಶ…!
0
SHARES
6
VIEWS
Share on FacebookShare on Twitter

ಬೆಂಗಳೂರು, ಫೆ. 18 : ಕ.ರಾ.ರ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.19, 2026ರಂದು “ಬೆಂಗಳೂರು ಚಲೋ” ಕಾರ್ಯಕ್ರಮಕ್ಕೆ ಕರೆ ನೀಡಿರುವ ಹಿನ್ನೆಲೆ, ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಜಂಟಿ ಕ್ರಿಯಾ ಸಮಿತಿ, ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ 01.01.2020ರಿಂದ 28.02.2023ರವರೆಗೆ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ 01.01.2024ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆಯನ್ನು ಕರ್ನಾಟಕ ಅಗತ್ಯ ಸೇವೆಗಳ ಕಾಯ್ದೆ–2013 (ಕರ್ನಾಟಕ ಕಾಯ್ದೆ ಸಂಖ್ಯೆ 25/2015) ಅಡಿಯಲ್ಲಿ ಒಳಪಡಿಸಿರುವುದರಿಂದ, ನೌಕರರು ಯಾವುದೇ ರೀತಿಯ ಮುಷ್ಕರ ನಡೆಸುವುದು ಕಾನೂನುಬಾಹಿರವಾಗಿದ್ದು, ಇತರರು ಪ್ರಚೋದನೆ ಅಥವಾ ಬೆಂಬಲ ನೀಡುವುದಕ್ಕೂ ಅವಕಾಶವಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಸರ್ಕಾರವು ನಿಗಮಗಳನ್ನು “ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ” ಎಂದು ಘೋಷಿಸಿರುವುದರಿಂದ ಜನಸಾಮಾನ್ಯರಿಗೆ ನಿರಂತರ ಸಾರಿಗೆ ಸೌಲಭ್ಯ ಒದಗಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯ ಎಂದು ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಫೆ.19ರಂದು ಯಾವುದೇ ನೌಕರರು “ಬೆಂಗಳೂರು ಚಲೋ” ಕಾರ್ಯಕ್ರಮದಲ್ಲಿ ಭಾಗವಹಿಸದೆ, ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಲಾಗಿದೆ.

ಮುಂಜಾಗ್ರತಾ ಸೂಚನೆಗಳು:

*ಫೆ.19ರಂದು ಅನುಸೂಚಿ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದು.

*ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಜೆ ಮಂಜೂರು ಮಾಡಬಾರದು.

*ಕರ್ತವ್ಯಕ್ಕೆ ಗೈರುಹಾಜರಾದವರ ವಿರುದ್ಧ “ಕೆಲಸ ಮಾಡದಿದ್ದಾಗ ವೇತನವಿಲ್ಲ” ಎಂಬ ತತ್ವದನ್ವಯ ಕ್ರಮ ಕೈಗೊಳ್ಳುವುದು.

*ವಾರದ ರಜೆ ಹಾಗೂ ದೀರ್ಘಾವಧಿ ರಜೆಯಲ್ಲಿರುವವರಿಗೆ ಈ ಸೂಚನೆ ಅನ್ವಯಿಸುವುದಿಲ್ಲ. ಆದರೆ ಅಗತ್ಯವಿದ್ದಲ್ಲಿ ವಾರದ ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬಹುದು.

ಗೈರುಹಾಜರಾದ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಜರುಗಿಸುವುದು.

ಇದೇ ವೇಳೆ, ರಾಜ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠವು 29.01.2004ರಂದು ನೀಡಿದ ತೀರ್ಪಿನ ಪ್ರಕಾರ, ಅನಧಿಕೃತ ಗೈರುಹಾಜರಿಗಾಗಿ ದಿನದ ವೇತನ ಕಡಿತಗೊಳಿಸುವುದರ ಜೊತೆಗೆ ಶಿಸ್ತಿನ ಕ್ರಮ ಕೈಗೊಳ್ಳಬಹುದೆಂದು ಉಲ್ಲೇಖಿಸಿ, ಈ ವಿಚಾರವನ್ನು ನೌಕರರ ಗಮನಕ್ಕೆ ತರಲಾಗಿದೆ.

Previous Post

📚“ಮೊಬೈಲ್ ಬಿಡಿ – ಪುಸ್ತಕ ಹಿಡಿ”: ವಿದ್ಯಾರ್ಥಿಗಳ ಓದು ಹವ್ಯಾಸ ಬೆಳೆಸಲು ಶಿಕ್ಷಣ ಇಲಾಖೆಯ ರಾಜ್ಯವ್ಯಾಪಿ ಅಭಿಯಾನ….!

Next Post

ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್….!

ನಂದಿನಿ ಉತ್ಪನ್ನಗಳ ವಿರುದ್ಧದ ಅಪಪ್ರಚಾರದ ಬಗ್ಗೆ ಕ್ರಮಕ್ಕೆ ಸನ್ನದ್ಧ: ಡಿ.ಕೆ. ಸುರೇಶ್....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

18/02/2026
ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

18/02/2026
ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

18/02/2026
ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

18/02/2026

Recent News

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

ಮಣಿಪಾಲದ ಡಾ. ಟಾಮ್ ದೇವಾಸಿಯಾ ಅವರಿಗೆ ಲಂಡನ್‌ನ ಪ್ರತಿಷ್ಠಿತ ಆಂಡ್ರಿಯಾಸ್ ಗ್ರಂಟ್‌ಜಿಗ್ ಫೆಲೋಶಿಪ್

18/02/2026
ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

ಶಿವರಾತ್ರಿ ಮಹೋತ್ಸವ: ಉಮಾಮಹೇಶ್ವರ ದೇವಾಲಯದಲ್ಲಿ ಸುರಮಣಿ ಮಹಾಲಕ್ಷ್ಮಿ ಶೆಣೈ ಸಂಗೀತ ವೈಭವ…..!

18/02/2026
ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

ಪುಣ್ಯಕ್ಷೇತ್ರ ದರ್ಶನಕ್ಕೆ ತೆರಳಿದ್ದ ,ಕಾಪು ಮೂಲದ ಯುವಕ ಚಿಕಿತ್ಸೆ ಫಲಿಸದೆ ಸಾವು…..!

18/02/2026
ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

ಡಾ. ಸಿಎ ಎ. ರಾಘವೇಂದ್ರ ರಾವ್ ವಿಧಿವಶ: ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ…!

18/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved