Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತಾಪ ಏರಿಕೆ;ಹವಾಮಾನ ಇಲಾಖೆಯ ಮುನ್ಸೂಚನೆ…!

Dhrishya News by Dhrishya News
23/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತಾಪ ಏರಿಕೆ;ಹವಾಮಾನ ಇಲಾಖೆಯ ಮುನ್ಸೂಚನೆ…!
0
SHARES
4
VIEWS
Share on FacebookShare on Twitter

ಬೆಂಗಳೂರು, ಫೆ. 23: ರಾಜ್ಯದಲ್ಲಿ ದಿನೇದಿನೇ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಹಲವೆಡೆ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ.

ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯಾಗಿದ್ದು, ಬಹುತೇಕ ಕಡೆ 35 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ದಾಖಲಾಗುತ್ತಿದೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕೆಲವು ಪ್ರದೇಶಗಳಲ್ಲಿ ವಾಡಿಕೆಗಿಂತ 3 ಡಿಗ್ರಿವರೆಗೆ ಹೆಚ್ಚಳ ಕಂಡುಬಂದಿದೆ.

ಏರಿಕೆಗೆ ಕಾರಣಗಳೇನು?

ಜಾಗತಿಕ ತಾಪಮಾನ ಏರಿಕೆ, ಗಾಳಿಯಲ್ಲಿ ತೇವಾಂಶದ ಕೊರತೆ, ನಿರ್ಮಲ ಆಕಾಶ ಹಾಗೂ ‘ಲಾ ನಿನಾ’ ಪರಿಣಾಮದಂತಹ ಅಂಶಗಳು ಬಿಸಿಲಿನ ತೀವ್ರತೆಯನ್ನು ಹೆಚ್ಚಿಸುತ್ತಿವೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಇದರ ಪರಿಣಾಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗರಿಷ್ಠ ಉಷ್ಣಾಂಶ 4ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳಲ್ಲಿ ತಾಪಮಾನ 42ರಿಂದ 45 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಏರಬಹುದು. ಬೆಂಗಳೂರಿನಲ್ಲಿಯೂ 39 ಡಿಗ್ರಿವರೆಗೆ ಏರಿಕೆಯ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಮಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ ಮತ್ತು ಕಲಬುರಗಿಯಲ್ಲಿ ತಲಾ 35.3 ಡಿಗ್ರಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 33ರಿಂದ 34 ಡಿಗ್ರಿ ಹಾಗೂ ಬೆಂಗಳೂರಿನಲ್ಲಿ 32.4 ಡಿಗ್ರಿ ದಾಖಲಾಗಿದೆ. ಮುಂದಿನ ವಾರಗಳಲ್ಲಿ ಇನ್ನೂ 1ರಿಂದ 2 ಡಿಗ್ರಿ ಹೆಚ್ಚಳವಾಗುವ ನಿರೀಕ್ಷೆಯಿದೆ.

ಸಾರ್ವಜನಿಕರಿಗೆ ಸಲಹೆ

ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು. ಸಾಕಷ್ಟು ನೀರು ಕುಡಿಯುವುದು ಅಗತ್ಯ. ತೆಳ್ಳನೆಯ, ಹಗುರ ಬಣ್ಣದ ಬಟ್ಟೆ ಧರಿಸುವುದು ಒಳಿತು. ಚಹಾ ಮತ್ತು ಕಾಫಿ ಬದಲು ತಂಪು ಪಾನೀಯಗಳು ಸೇವಿಸಬೇಕು.

ವಿಶೇಷವಾಗಿ ರಕ್ತದೊತ್ತಡ, ಹೃದಯ ಸಂಬಂಧಿ ಸಮಸ್ಯೆಗಳು ಇರುವವರು, ಗರ್ಭಿಣಿಯರು, ಹಿರಿಯರು ಮತ್ತು ಮಕ್ಕಳಿಗೆ ಹೆಚ್ಚಿನ ಜಾಗ್ರತೆ ಅಗತ್ಯವಿದೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚುವರಿ ಬಿಸಿಲು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಜನರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಲು ಹವಾಮಾನ ಇಲಾಖೆ ಮನವಿ ಮಾಡಿದೆ.

Previous Post

ಲೂಡೋ ಕಾಯಿನ್ ನುಂಗಿ 8 ವರ್ಷದ ಬಾಲಕಿ ಮೃತ್ಯು; ಪೋಷಕರಿಗೆ ತಜ್ಞರ ಎಚ್ಚರಿಕೆ…!

Next Post

ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ….!

ಕಟೀಲು ದೇವಸ್ಥಾನದಲ್ಲಿ 35 ಜೋಡಿಗಳ ಸಾಮೂಹಿಕ ವಿವಾಹ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/02/2026
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

23/02/2026
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

23/02/2026
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

23/02/2026

Recent News

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

23/02/2026
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

23/02/2026
ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

23/02/2026
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ “ಮಾತೃ ವೈಭವ” ಪ್ರಥಮ ವರ್ಧಂತಿ: ಪೂರ್ವಭಾವಿ ಸಭೆ….!

23/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved