Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

Dhrishya News by Dhrishya News
23/02/2026
in ಸುದ್ದಿಗಳು
0
ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!
0
SHARES
18
VIEWS
Share on FacebookShare on Twitter

ಸಿದ್ದಾಪುರ, ಫೆ. 23: ಉಳ್ಳೂರು-74 ಗ್ರಾಮದ ನಿಡುಕೋಡು ನಿವಾಸಿ ಸುಧೀರ ಶೆಟ್ಟಿ (26) ಅವರು ವಾರಾಹಿ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಫೆಬ್ರವರಿ 15ರಂದು ಅವರು ಹೊಸಂಗಡಿ ಗ್ರಾಮದ ಭಾಗೀಮನೆ ಪ್ರದೇಶದ ವಾರಾಹಿ ಹೊಳೆಗೆ ಈಜಲು ತೆರಳಿದ್ದರು. ಈಜಲು ಸರಿಯಾಗಿ ತಿಳಿದಿರದ ಕಾರಣ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 21ರಂದು ಅವರು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಮೃತರ ತಂದೆ ಭುಜಂಗ ಶೆಟ್ಟಿ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸುಧೀರ ಶೆಟ್ಟಿ ಉಳ್ಳೂರು-74 ಗ್ರಾಮದ ಶ್ರೀ ಬನಶಂಕರಿ ಯುವಕ ಮಂಡಲದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಖಾಸಗಿ ಕಂಪನಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು. ಅವಿವಾಹಿತರಾದ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

Previous Post

ಯುವಕ ಆತ್ಮಹತ್ಯೆ ಯತ್ನ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ….!

Next Post

ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ….!

ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

17/04/2026
ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

17/04/2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

17/04/2026

Recent News

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

17/04/2026
ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

17/04/2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

17/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved