Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ….!

Dhrishya News by Dhrishya News
23/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಜೂನ್ ಒಳಗೆ ಗ್ರಾಮ-ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ: ಸಿಎಂ ಸ್ಪಷ್ಟನೆ….!
0
SHARES
4
VIEWS
Share on FacebookShare on Twitter

ಕಾರವಾರ, ಫೆ. 23:ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗಾಗಿ ನಡೆಸಲಾಗುವುದು. ಈ ಕುರಿತು ಯಾವುದೇ ಅನುಮಾನ ಅಥವಾ ಗೊಂದಲ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಸರ್ಕಾರದ ಗಮನದಲ್ಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪೂರ್ಣಗೊಂಡ ಬಳಿಕ ಗೋಕರ್ಣಕ್ಕೆ ಪಟ್ಟಣ ಪಂಚಾಯಿತಿ ಹುದ್ದೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಉಲ್ಲೇಖಿಸಿದ ಸಿಎಂ, ಪುನರ್‌ಪ್ರಸ್ತಾವ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿತ 450 ಹಾಸಿಗೆಗಳ ಬಹು ವಿಶೇಷತೆಗಳ ಆಸ್ಪತ್ರೆ ಕಟ್ಟಡ, ಯಲ್ಲಾಪುರ ತಾಲೂಕಿನ ಖಾನಾಪುರ–ತಾಳಗುಪ್ಪ ರಾಜ್ಯ ಹೆದ್ದಾರಿ 93ರ ನೂತನ ಸೇತುವೆ, ಯಲ್ಲಾಪುರ ಪಟ್ಟಣದ ಹೊಸ ನಿರೀಕ್ಷಣಾ ಮಂದಿರ ಹಾಗೂ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರವನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

ಗ್ಯಾರಂಟಿ ಯೋಜನೆಗಳ ಜತೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೆ ತಂದು ರಾಜ್ಯವನ್ನು ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದೇವೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದರು.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್ ಹಾಗೂ ಮಂಕಾಳ ವೈದ್ಯ, ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Previous Post

ಹೊಳೆಯಲ್ಲಿ ಮುಳುಗಿದ ಯುವಕ ,ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

Next Post

ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ….!

ಉಡುಪಿ ಜಿಲ್ಲೆಯಲ್ಲಿ ಕೃಷಿ ಮಣ್ಣು ಸಾಗಾಣಿಕೆ ಸಮಸ್ಯೆ: ಅಧಿಕಾರಿಗಳ ಸಭೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

17/04/2026
ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

17/04/2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

17/04/2026

Recent News

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ

17/04/2026
ಮಾಬುಕಳ ಸೇತುವೆ ಬಳಿ ಭೀಕರ ಅಪಘಾತ: ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವು..!

ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಕಾರು ಚಾಲಕ ಸಾವು..!!

17/04/2026
ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

ದ್ವಿತೀಯ ಪಿಯುಸಿ ಪರೀಕ್ಷೆ-2: ಅರ್ಜಿ ಸಲ್ಲಿಕೆ ಗಡುವು ಏಪ್ರಿಲ್ 18ರವರೆಗೆ ವಿಸ್ತರಣೆ

17/04/2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

ಹೊಸ ವಿನ್ಯಾಸದ ನವೀಕರಣದೊಂದಿಗೆ ಯಮಹಾ ಫ್ಯಾಸಿನೊ ಶೈಲಿಯನ್ನು ಬದಲಾಯಿಸುತ್ತದೆ

17/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved