Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!

Dhrishya News by Dhrishya News
23/02/2026
in ಕರಾವಳಿ, ಸುದ್ದಿಗಳು
0
ಮೀನುಗಾರರ ಅಭಿವೃದ್ಧಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ….!
0
SHARES
16
VIEWS
Share on FacebookShare on Twitter

ಮಣಿಪಾಲ, ಫೆ. 23:ಜಿಲ್ಲೆಯಲ್ಲಿ ಮೀನುಗಾರರ ಸಂಖ್ಯೆ ಹೆಚ್ಚು ಇರುವ ಹಿನ್ನೆಲೆಯಲ್ಲಿ, ಅವರ ಸಮಗ್ರ ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ಮತ್ತು ಗುರಿ ನಿಗದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಮೀನುಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುವ ಆರ್ಥಿಕ ಸೌಲಭ್ಯಗಳು ಮತ್ತು ಸಹಾಯಧನಗಳ ಬಗ್ಗೆ ಸಮರ್ಪಕ ಮಾಹಿತಿ ಫಲಾನುಭವಿಗಳಿಗೆ ತಲುಪಿಸಬೇಕು. ಅವರಿಗೆ ಸ್ವಾವಲಂಬಿ ಜೀವನ ನಡೆಸಲು ನೆರವಾಗುವಂತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ನಿಗದಿಪಡಿಸಿರುವ ಅನುದಾನ ಮತ್ತು ಗುರಿಗಳು ಜಿಲ್ಲೆಯ ಅಗತ್ಯಗಳಿಗೆ ತಕ್ಕಮಟ್ಟಿಗೆ ಇಲ್ಲ. ಆದ್ದರಿಂದ ಹೆಚ್ಚುವರಿ ಅನುದಾನ ಮಂಜೂರಿಗಾಗಿ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ 5,598 ಮೋಟಾರೀಕೃತ ನಾಡದೋಣಿಗಳು, 2,017 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಹಾಗೂ 447 ಸಾಂಪ್ರದಾಯಿಕ ನಾಡದೋಣಿಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ಸಾಲಿನಲ್ಲಿ ಪಿಎಂಎಂಎಸ್‌ವೈ ಯೋಜನೆಯಡಿ ಪಚ್ಚಿಲೆ ಕೃಷಿ, ಮಸೆಲ್ಸ್‌, ಕಲ್ಲು, ಕ್ಲಾಮ್ಸ್‌, ಮುತ್ತು ಬೆಳವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶೇಕಡಾ 100 ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗಾಗಿ ಜಿಲ್ಲೆಯ 6 ಫಲಾನುಭವಿಗಳಿಗೆ ಸುಮಾರು ₹200 ಲಕ್ಷ ಸಹಾಯಧನ ಮಂಜೂರಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಬಿ.ವಿ., ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಹಾಗೂ ಆಯ್ಕೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Previous Post

ದೇವಳಗುಜ್ಜಿಯಲ್ಲಿ ಬೋನಿಗೆ ಬಿದ್ದ ಚಿರತೆ; ಅಭಯಾರಣ್ಯಕ್ಕೆ ಸ್ಥಳಾಂತರ….!

Next Post

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

ಮರಿಪರಪು ಪಾದೆ ಶ್ರೀ ವ್ಯಾಘ್ರ ಚಾಮುಂಡಿ ದೇವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ಸಂಪನ್ನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check