Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ದುಸ್ಥಿತಿ: ತಕ್ಷಣ ಸುಧಾರಣೆ ಕೈಗೊಳ್ಳಲು ಕರವೇ ಆಗ್ರಹ…!

Dhrishya News by Dhrishya News
24/02/2026
in ಕರಾವಳಿ, ಸುದ್ದಿಗಳು
0
ಉಡುಪಿ ಸರ್ವಿಸ್ ಬಸ್ ನಿಲ್ದಾಣದ ದುಸ್ಥಿತಿ: ತಕ್ಷಣ ಸುಧಾರಣೆ ಕೈಗೊಳ್ಳಲು ಕರವೇ ಆಗ್ರಹ…!
0
SHARES
4
VIEWS
Share on FacebookShare on Twitter

ಉಡುಪಿ, ಫೆ.24: ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ತುರ್ತು ಕ್ರಮ ಕೈಗೊಳ್ಳುವಂತೆ ನಗರಸಭೆಯನ್ನು ಆಗ್ರಹಿಸಿದ್ದಾರೆ.

ಪ್ರತಿದಿನ ಸಾವಿರಾರು ಮಂದಿ ಸಂಚರಿಸುವ ಈ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯಗಳ ಕೊರತೆ ಕಾಡುತ್ತಿದೆ. ಕುಡಿಯುವ ನೀರಿನ ಘಟಕ ಶುದ್ಧತೆಯಿಲ್ಲದೆ ಇರುವುದರಿಂದ ಪ್ರಯಾಣಿಕರು ಹಣ ಪಾವತಿಸಿ ನೀರು ಖರೀದಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕೆಲವೆಡೆ ಕುರ್ಚಿಗಳು ಹಾಳಾಗಿದ್ದು, ಸಮರ್ಪಕ ಆಸನ ವ್ಯವಸ್ಥೆಯಿಲ್ಲದೆ ವೃದ್ಧರು ಹಾಗೂ ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಮಹಿಳಾ ಮತ್ತು ಪುರುಷರ ಪ್ರತ್ಯೇಕ ಶೌಚಾಲಯಗಳು ಸರಿಯಾಗಿ ನಿರ್ವಹಣೆ ಕಾಣದೆ ಬಳಕೆಗೆ ಅಸಮರ್ಪಕವಾಗಿವೆ. ಕಳಪೆ ಕಾಮಗಾರಿ ಹಾಗೂ ಅಸ್ವಚ್ಛತೆಯಿಂದ ಸುತ್ತಮುತ್ತ ದುರ್ವಾಸನೆ ವಾತಾವರಣ ಉಂಟಾಗಿದ್ದು, ನಿಲ್ದಾಣದಲ್ಲಿ ಕಾಯುವವರಿಗೂ ಅಸೌಕರ್ಯವಾಗುತ್ತಿದೆ.

ಇದಕ್ಕೂ ಮೀರಿಯಾಗಿ, ನಿಲ್ದಾಣದ ಆವರಣದಲ್ಲಿ ಧೂಳು ಮತ್ತು ಕಸದ ರಾಶಿಗಳು ಸಾಮಾನ್ಯ ದೃಶ್ಯವಾಗಿವೆ. ತಿಂಡಿ ಪೊಟ್ಟಣಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಎಲ್ಲೆಂದರಲ್ಲಿ ಬಿದ್ದಿರುವುದರಿಂದ ಪರಿಸರ ಅಸ್ವಚ್ಛವಾಗಿದ್ದು, ಜನರು ಅದೇ ಪರಿಸ್ಥಿತಿಯಲ್ಲಿ ನಿಂತುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಸಾರ್ವಜನಿಕರಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸಂಬಂಧಪಟ್ಟ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಸಮಗ್ರ ದುರಸ್ತಿ ಹಾಗೂ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದ ಸ್ಥಿತಿ ಸುಧಾರಿಸಲು ನಗರಸಭೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸುಜಯ್ ಪೂಜಾರಿ ಒತ್ತಾಯಿಸಿದ್ದಾರೆ.

Previous Post

ನಕಲಿ ಹುಲಿ ಉಗುರು ಮಾರಾಟ ಯತ್ನ: ಸನ್ಯಾಸಿ ವೇಷದ ವ್ಯಕ್ತಿ ಅರಣ್ಯ ಇಲಾಖೆ ಬಲೆಗೆ…..!

Next Post

ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ….!

ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check