Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ….!

Dhrishya News by Dhrishya News
24/02/2026
in ಕರಾವಳಿ, ಸುದ್ದಿಗಳು
0
ರಸ್ತೆ ತಡೆ ವಿಚಾರಕ್ಕೆ ಗಲಾಟೆ: ಕಾರು ಹರಿಸಲು ಯತ್ನ….!
0
SHARES
20
VIEWS
Share on FacebookShare on Twitter

ಕಾರ್ಕಳ, ಫೆ. 24: ತಾಲೂಕಿನ ಕಸಬಾ ಗ್ರಾಮದ ಕುಂಬ್ರಪದವು ಪ್ರದೇಶದಲ್ಲಿ ರಸ್ತೆ ಮಧ್ಯೆ ಕಾರು ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬರ ಮೇಲೆ ಕಾರು ಹರಿಸಲು ಯತ್ನಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಪಣಪಿಲ ನಿವಾಸಿ ನಿತಿನ್ (35) ಶನಿವಾರ ಬೆಳಗ್ಗೆ ರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ, ಸೋಮನಾಥ ಎಂಬಾತ ತನ್ನ ಐ-10 ಕಾರನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿದ್ದಾಗಿ ತಿಳಿದುಬಂದಿದೆ. ದಾರಿ ಬಿಡುವಂತೆ ನಿತಿನ್ ಹಾರ್ನ್ ನೀಡಿದರೂ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಅವರು ವಾಹನದಿಂದ ಇಳಿದು ಕಾರನ್ನು ತೆಗೆಯುವಂತೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಆಕ್ರೋಶಗೊಂಡ ಆರೋಪಿಯು ಏಕಾಏಕಿ ಕಾರನ್ನು ನಿತಿನ್ ಅವರತ್ತ ಚಲಾಯಿಸಿ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಿತಿನ್ ತಕ್ಷಣ ತಪ್ಪಿಸಿಕೊಂಡು ರಿಕ್ಷಾ ಬಳಿಗೆ ತೆರಳಿದಾಗ, ಆರೋಪಿಯು ಅಲ್ಲಿಗೂ ಬಂದು ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜಗಳ ಶಮನಕ್ಕೆ ಬಂದವರ ಮೇಲೂ ಅವಾಚ್ಯ ಶಬ್ದ ಬಳಸಿ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಅಲ್ಲದೆ, ಸಂಜೆ ವೇಳೆಗೆ ನಿತಿನ್ ಅವರ ಪರಿಚಯಸ್ಥರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Previous Post

ಉಡುಪಿ ಸರ್ವಿಸ್ ಬಸ್ ನಿಲ್ದಾಣದ ದುಸ್ಥಿತಿ: ತಕ್ಷಣ ಸುಧಾರಣೆ ಕೈಗೊಳ್ಳಲು ಕರವೇ ಆಗ್ರಹ…!

Next Post

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ: ಮಾಹಿತಿ ನೀಡುವಂತೆ ಪೊಲೀಸರ ಮನವಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ: ಮಾಹಿತಿ ನೀಡುವಂತೆ ಪೊಲೀಸರ ಮನವಿ…!

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ: ಮಾಹಿತಿ ನೀಡುವಂತೆ ಪೊಲೀಸರ ಮನವಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check