Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ…!

Dhrishya News by Dhrishya News
25/02/2026
in ಕರಾವಳಿ, ಸುದ್ದಿಗಳು
0
ಗರ್ಭಿಣಿ ಮಹಿಳೆ ಮರಣ ಪ್ರಕರಣ: ವೈದ್ಯಕೀಯ ಮಂಡಳಿಯಿಂದ ತನಿಖೆಗೆ ಜಿಲ್ಲಾಧಿಕಾರಿ ಸೂಚನೆ…!
0
SHARES
13
VIEWS
Share on FacebookShare on Twitter

ಉಡುಪಿ, ಫೆ.25: ಕಾರ್ಕಳ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ಉನ್ನತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾಬೀಸ್ತಾ ಬಾನು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ವೈದ್ಯಕೀಯ ಮಂಡಳಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮಂಗಳವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಕುರಿತು ಮಾತನಾಡಿದರು.

ಹೆರಿಗೆಯ ನಂತರ ತಾಯಿ ಹಾಗೂ ನವಜಾತ ಶಿಶುವಿಗೆ ಅಗತ್ಯವಾದ ಎಲ್ಲ ಚಿಕಿತ್ಸೆಯನ್ನೂ ಕಡ್ಡಾಯವಾಗಿ ಒದಗಿಸಬೇಕು. ತಜ್ಞರ ಸಲಹೆ ಅಗತ್ಯವಿದ್ದಲ್ಲಿ ತಕ್ಷಣವೇ ರೆಫರಲ್ ನೀಡಿ ಸೂಕ್ತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯ ಪ್ರತಿಯೊಬ್ಬ ಗರ್ಭಿಣಿಗೂ ತಾಯಿಕಾರ್ಡ್ ವಿತರಣೆ ಮಾಡಲಾಗಬೇಕು. ಗರ್ಭಾವಸ್ಥೆಯ ಅವಧಿಯಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ನಿಯಮಿತ ವೈದ್ಯಕೀಯ ತಪಾಸಣೆ ನಡೆಸುವುದು ಅವಶ್ಯಕ. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿ ತಮ್ಮ ತಮ್ಮ ಹಂತದಲ್ಲಿ ಸಭೆಗಳನ್ನು ನಡೆಸಿ ಗರ್ಭಿಣಿಯರು ಮತ್ತು ಶಿಶುಗಳಿಗೆ ಎಚ್ಚರಿಕೆಯಿಂದ ಚಿಕಿತ್ಸೆ ನೀಡುವಂತೆ ಸೂಚಿಸಬೇಕು. ಈ ಮೂಲಕ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ಗುರಿ ಹೊಂದಬೇಕು ಎಂದು ಹೇಳಿದರು.

ಜನರಲ್ಲಿ ಆರೋಗ್ಯ ಅರಿವು ಹೆಚ್ಚಿಸುವುದು ಮಹತ್ವದ್ದು. ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ ಮುಂಚಿತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯಕೀಯ ನೆರವು ಪಡೆಯುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಸರಕಾರ ಜನಸಾಮಾನ್ಯರ ಆರೋಗ್ಯ ಭದ್ರತೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಲಸಿಕಾ ಕಾರ್ಯಕ್ರಮಕ್ಕೆ ಒತ್ತು

ಮಕ್ಕಳಿಗೆ ನೀಡಬೇಕಾದ ಎಲ್ಲಾ ರೋಗನಿರೋಧಕ ಲಸಿಕೆಗಳನ್ನು ಶೇ.100ರಷ್ಟು ನೀಡಬೇಕು. ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ಕೈಗೊಳ್ಳಬೇಕು. ಹೊರಗುಳಿದ ಮಕ್ಕಳಿಗೆ ಮರು ದಿನಾಂಕ ನಿಗದಿ ಮಾಡಿ ಲಸಿಕೆ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಜಂತುಹುಳು ನಿವಾರಣಾ ಮಾತ್ರೆಗಳ ವಿತರಣೆ ಶೇ.100ರಷ್ಟು ಸಾಧನೆಯಾಗಿದೆ ಎಂದು ತಿಳಿಸಿದರು.

ಮಾನಸಿಕ ಅಸ್ವಸ್ಥರ ಆರೈಕೆ

ರಸ್ತೆಗಳಲ್ಲಿ ಗುರುತಿಲ್ಲದೆ ಅಲೆದಾಡುತ್ತಿರುವ ಮಾನಸಿಕ ಅಸ್ವಸ್ಥರನ್ನು ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಬೇಕು. ನಂತರ ಅವರನ್ನು ಅವರ ಕುಟುಂಬದವರ ಬಳಿಗೆ ತಲುಪಿಸುವ ಕಾರ್ಯ ಸೇವಾಭಾವದಿಂದ ಮಾಡಬೇಕು. ಕೇಂದ್ರದ ಸಹಾಯವಾಣಿ ಸಂಖ್ಯೆ 7795978883 ಕುರಿತು ಸಾರ್ವಜನಿಕರಿಗೆ ವ್ಯಾಪಕ ಮಾಹಿತಿ ನೀಡುವಂತೆ ಸೂಚಿಸಿದರು.

ಕ್ಷಯರೋಗ ನಿರ್ಮೂಲನೆಗೆ ಕ್ರಮ

ಕ್ಷಯರೋಗ ಪತ್ತೆ ಪರೀಕ್ಷೆಗಳನ್ನು ವಿಸ್ತರಿಸಿ ರೋಗಿಗಳನ್ನು ಬೇಗ ಗುರುತಿಸಿ ಚಿಕಿತ್ಸೆ ನೀಡಬೇಕು. ಈ ವರ್ಷ ಜಿಲ್ಲೆಯಲ್ಲಿ 64 ಗ್ರಾಮ ಪಂಚಾಯಿತಿಗಳು ಕ್ಷಯರೋಗ ನಿರ್ಮೂಲನೆಗೆ ಉತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಗೋಲ್ಡ್, ಸಿಲ್ವರ್ ಮತ್ತು ಬ್ರಾಂಜ್ ಪದಕಗಳಿಗೆ ಆಯ್ಕೆಯಾಗಿವೆ ಎಂದು ತಿಳಿಸಿದರು.

ರಕ್ತದಾನ ಶಿಬಿರಗಳ ಅಗತ್ಯ

ಜಿಲ್ಲೆಯ ರಕ್ತನಿಧಿ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಪ್ರಮಾಣದ ರಕ್ತ ಸಂಗ್ರಹವಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಬೈಂದೂರು, ಕುಂದಾಪುರ ಹಾಗೂ ಉಡುಪಿಯ ತಾಯಿ-ಮಕ್ಕಳ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ರಕ್ತನಿಧಿ ಘಟಕಗಳನ್ನು ಆರಂಭಿಸುವಂತೆ ಸೂಚಿಸಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ‘ನಮ್ಮ ಕ್ಲಿನಿಕ್’ಗಳಿಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಮಾರ್ಗಸೂಚಿ ಪ್ರಕಾರ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ತಜ್ಞ ವೈದ್ಯರು ಉಪಸ್ಥಿತರಿದ್ದರು.

Previous Post

ಆಹಾರ ಕಿಯೋಸ್ಕ್” ಯೋಜನೆ : ವಿಶ್ವಕರ್ಮ ಸಮುದಾಯದವರಿಗೆ ಮೊಬೈಲ್ ಕ್ಯಾಂಟೀನ್ ತೆರೆಯಲು 3 ಲಕ್ಷ ರೂ. ಸಹಾಯಧನ..!!

Next Post

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ….!

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಮ್ಮೆ ಎರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ ಪ್ರಶಸ್ತಿ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved