Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೋಟ್ ಮುಳುಗಡೆ;ಐವರು ಮೀನುಗಾರರ ರಕ್ಷಣೆ….!

Dhrishya News by Dhrishya News
26/02/2026
in ಕರಾವಳಿ, ಸುದ್ದಿಗಳು
0
ಬೋಟ್ ಮುಳುಗಡೆ;ಐವರು ಮೀನುಗಾರರ ರಕ್ಷಣೆ….!
0
SHARES
13
VIEWS
Share on FacebookShare on Twitter

ಗಂಗೊಳ್ಳಿ, ಫೆ. 26: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಒಂದು ಸಮುದ್ರದಲ್ಲಿ ನೀರು ನುಗ್ಗಿ ಮುಳುಗಿದ ಘಟನೆ ಕುಂದಾಪುರ–ಗಂಗೊಳ್ಳಿ ನಡುವಿನ ಸಮುದ್ರ ಪ್ರದೇಶದಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ ಐದು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇನ್ನೊಂದು ಬೋಟ್‌ನ ಸಿಬ್ಬಂದಿ ಸಮಯೋಚಿತವಾಗಿ ರಕ್ಷಿಸಿದ್ದಾರೆ.

ರಕ್ಷಿಸಲ್ಪಟ್ಟವರನ್ನು ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂದು ಗುರುತಿಸಲಾಗಿದೆ.

ಫೆಬ್ರವರಿ 23ರ ರಾತ್ರಿ ಮಲ್ಪೆ ಬಂದರಿನಿಂದ ಹೊರಟಿದ್ದ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ‘ಶ್ರೀ ದುರ್ಗಾಪರಮೇಶ್ವರಿ’ ಬೋಟ್ ಫೆಬ್ರವರಿ 24ರಂದು ಸಮುದ್ರದಲ್ಲಿ ಸಂಚರಿಸುತ್ತಿದ್ದ ವೇಳೆ ಅಡಿಭಾಗಕ್ಕೆ ಅನಾಮಿಕ ವಸ್ತು ತಾಗಿ ಹಾನಿಯಾಗಿದೆ. ಪರಿಣಾಮವಾಗಿ ಎಂಜಿನ್ ಭಾಗದ ಮೂಲಕ ಬೋಟ್‌ಗೆ ನೀರು ನುಗ್ಗಲಾರಂಭಿಸಿತು.

ಬೋಟ್‌ನಲ್ಲಿದ್ದವರು ನೀರನ್ನು ಹೊರಹಾಕಲು ಪ್ರಯತ್ನಿಸಿದರೂ ಫಲಕಾರಿಯಾಗದೆ, ಎಂಜಿನ್ ಕಾರ್ಯನಿರ್ವಹಣೆ ನಿಲ್ಲಿತು. ತಕ್ಷಣ ಸಹಾಯಕ್ಕಾಗಿ ಮಾಹಿತಿ ನೀಡಲಾಗಿದ್ದು, ಮಲ್ಪೆ ಬಂದರಿನ ‘ಶ್ರೀ ಕೃಷ್ಣ’ ಬೋಟ್ ಹಾಗೂ ಕರಾವಳಿ ರಕ್ಷಣಾ ಪಡೆ (ಕೋಸ್ಟ್ ಗಾರ್ಡ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಐವರನ್ನೂ ಸುರಕ್ಷಿತವಾಗಿ ರಕ್ಷಿಸಿದರು.

ನಂತರ ಹಾನಿಗೊಳಗಾದ ಬೋಟ್‌ಗೆ ಹಗ್ಗ ಕಟ್ಟಿ ಗಂಗೊಳ್ಳಿ ಬಂದರಿನತ್ತ ಎಳೆದುಕೊಂಡು ಬರುತ್ತಿದ್ದ ವೇಳೆ, ಸುಮಾರು 8–9 ನಾಟಿಕಲ್ ಮೈಲು ದೂರದಲ್ಲಿ ಬಿರು ಗಾಳಿ ಮತ್ತು ಅಲೆಗಳ ತೀವ್ರತೆಯಿಂದ ಹಗ್ಗ ತುಂಡಾಗಿ ಬೋಟ್ ಸಂಪೂರ್ಣವಾಗಿ ಸಮುದ್ರದಡಿಗೆ ಸೇರಿದದು.

ಘಟನೆಯಿಂದ ಸುಮಾರು ₹60–65 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಬೋಟ್ ಮಾಲೀಕ ನಾಗರಾಜ್ ಪುತ್ರನ್ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Previous Post

ಲಾರಿ–ಟೆಂಪೋ ಮುಖಾಮುಖಿ;ವಾಹನಗಳು ಜಖಂ…!

Next Post

ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ…!

ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News