ಮಲ್ಪೆ, ಫೆ. 28:ಹೂಡೆ ಪೆರ್ಲಕಡಿ ಸಮುದ್ರ ಸಮೀಪವಿರುವ ಖಾಸಗಿ ಗೆಸ್ಟ್‌ಹೌಸ್‌ನಲ್ಲಿ ಶುಕ್ರವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲ ವಸ್ತುಗಳಿಗೆ ಹಾನಿಯಾಗಿದೆ.
ಎಸಿ ಯಂತ್ರದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆ ಸಂಭವಿಸಿದ ವೇಳೆ ಗೆಸ್ಟ್‌ಹೌಸ್‌ನಲ್ಲಿ ಯಾರೂ ಇರದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ಅವಘಡದಲ್ಲಿ ಏರ್‌ಕಂಡಿಷನರ್ ಸಂಪೂರ್ಣವಾಗಿ ದಹನಗೊಂಡಿದ್ದು, ಕೊಠಡಿಯ ಕೆಲವು ಉಪಕರಣಗಳು ಹಾನಿಗೊಳಗಾಗಿವೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಹೆಚ್ಚಿನ ತನಿಖೆ ನಡೆಯುತ್ತಿದೆ.







