Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ವಿಧಾನಸಭೆ ಸ್ಪೀಕರ್ ಆಗಿ ಯು.ಟಿ ಖಾದರ್ ಆಯ್ಕೆ..!!

Dhrishya News by Dhrishya News
24/05/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೆಂಗಳೂರು: ಇಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಶಾಸಕ ಯು.ಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಬಳಿಕ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ಅಧಿಕಾರ ಕೂಡ ವಹಿಸಿಕೊಂಡರು. 

ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದಂತ ಅವರು, ಕರ್ನಾಟಕ ವಿಧಾನಸಭೆ ಸಗಪೀಕರ್ ಆಗಿ ಕಿರಿಯ ವಯಸ್ಸಿನಲ್ಲಿ ಆಯ್ಕೆಯಾಗಿರೋದಕ್ಕೆ ಹೆಮ್ಮೆ ಪಡ್ತೇನೆ. ನಿಮ್ಮೆಲ್ಲರಿಗೂ ವಂದಿಸ್ತೇನೆ. ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಬೊಮ್ಮಾಯಿ ಅವರಿಗೆ, ಡಿಸಿಎಂ ಡಿಕೆಶಿ, ಎಲ್ಲಾ ಶಾಸಕರಿಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಈ ಅವಕಾಶ ಸಿಕ್ಕಿದ್ದಕ್ಕೆ ಕ್ಷೇತ್ರದ ಜನರು, ಎಲ್ಲಾ ಜಾತಿ, ಧರ್ಮ, ಎಲ್ಲಾ ಧಾರ್ಮಿಕ ಮುಖಂಡರಿಗೆ ಧನ್ಯವಾದ ಹೇಳ್ತೀನಿ ಎಂದರು.

ನನ್ನ ಕ್ಷೇತ್ರದ ಜನಪ್ರತಿನಿಧಿಯಾಗಿ ಅನೇಕರು ಆಯ್ಕೆಯಾಗಿದ್ರು. ಅದನ್ನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನನಗಿದೆ. ಸ್ಪೀಕರ್ ಆಗಿ ನಾನೊಬ್ಬನೇ ಅಲ್ಲದೆ, ಎಲ್ಲಾ ಶಾಸಕರೂ ಒಟ್ಟಿಗೆ ಕೆಲಸ ಮಾಡಬೇಕಿದೆ. ಸಂವಿಧಾನದ ಮೌಲ್ಯ ಉಳಿಸಲು ಈ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ನಾವೆಲ್ಲರೂ ಪರಸ್ಪರ ಶತ್ರುಗಳಲ್ಲ. ನಾಡಿನ ಜನತೆಗೆ ಸೇವೆ ಮಾಡುವುದಾಗಿದೆ. ನಾಡಿನ ಜನರ ಸಮಸ್ಯೆ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು. ಅವುಗಳ ಬಗ್ಗೆ ಚರ್ಚೆ ಮಾಡಿ, ಎಲ್ಲರ ಸಮಸ್ಯೆ ಬಗೆ ಹರಿಸಬೇಕಿದೆ ಎಂದರು.

ಎಲ್ಲಾ ಪಕ್ಷದವರು ಆಯ್ಕೆಯಾಗಿ ಬಂದಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾಗಿ ಬಂದಿದ್ದಾರೆ. ಎಲ್ಲಾ ಶಾಸಕರ ಗೌರವ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ. ನಾನು ಕಾನೂನು ಪದವೀಧರನಾಗಿ, ಅತ್ಯಂತ ಯಶಸ್ವಿಯಾಗಿ ನಿರ್ವಹಿಸಬೇಕಿದೆ. ನಾವು ಗಾಂಧಿ ಕೊಟ್ಟ, ಅಂಬೇಡ್ಕರ್ ಕೊಟ್ಟ ಮಾರ್ಗದರ್ಶನ ಪಾಲಿಸಬೇಕಿದೆ ಎಂದರು.

ಸದನದಲ್ಲಿ ಹಲವಾರು ನಾಯಕರು ಸ್ಪೀಕರ್ ಆಗಿ ನೇಮಕ‌ ಆಗಿದ್ದಾರೆ. ಇಲ್ಲಿ ಅಖಂಡತೆಯನ್ನ, ಗೌರವವನ್ನು ಎತ್ತಿ ಹಿಡಿಯುವ ಕೆಲಸಮಾಡಬೇಕಿದೆ. ನಮ್ಮ ಕಿರಿಯರಿಗೆ ಹೇಳುವುದೇನೆಂದ್ರೆ ಹಿರಿಯರು ಹೇಳುವ ಮಾರ್ಗದರ್ಶನದಂತೆ ನಡೆಯಬೇಕು. ರೂಲ್ ಬುಕ್ ಅಧ್ಯಯನ ಮಾಡಿ. ನಾವೆಲ್ಲರೂ ಸೇರಿ ಇತಿಹಾಸ ಓದಬೇಕಿದೆ, ಹಾಗಾಗಿ ಗ್ರಂಥಾಲಯ ಬಳಕೆ ಮಾಡಿ ಎಂದು ತಿಳಿಸಿದರು.

Previous Post

ಕಾಪು:ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿರುವ ವಿಡಿಯೋ ವೈರಲ್!!

Next Post

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಜನರ ಸೇವೆ ಶುರುಮಾಡಲಿವೆ – ಸಿದ್ಧರಾಮಯ್ಯ ಟ್ವಿಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಜನರ ಸೇವೆ ಶುರುಮಾಡಲಿವೆ - ಸಿದ್ಧರಾಮಯ್ಯ ಟ್ವಿಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News