Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನೇತ್ರಾವತಿ ನದಿಯಲ್ಲಿ ಆಧಾರ್‌ ಕಾರ್ಡ್‌ಗಳ ರಾಶಿ ಪತ್ತೆ; ಗ್ರಾಮಸ್ಥರಲ್ಲಿ ಅನುಮಾನ..!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ನೇತ್ರಾವತಿ ನದಿಯಲ್ಲಿ ಆಧಾರ್‌ ಕಾರ್ಡ್‌ಗಳ ರಾಶಿ ಪತ್ತೆ; ಗ್ರಾಮಸ್ಥರಲ್ಲಿ ಅನುಮಾನ..!
0
SHARES
50
VIEWS
Share on FacebookShare on Twitter

ಬಂಟ್ವಾಳ, ಮಾ. 05: ಫರಂಗಿಪೇಟೆ ಸಮೀಪದ 10ನೇ ಮೈಲ್‌ಕಲ್ಲು ಬಳಿ ನೇತ್ರಾವತಿ ನದಿಯ ತೀರದಲ್ಲಿ ಆಧಾರ್‌ ಕಾರ್ಡ್‌ಗಳ ಗುಚ್ಚ ಪತ್ತೆಯಾಗಿರುವುದು ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಪರಿಶೀಲನೆ ನಡೆಸಿದಾಗ ಅವುಗಳಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸಗಳಿರುವುದು ಗಮನಕ್ಕೆ ಬಂದಿದ್ದು, ಘಟನೆ ಕುರಿತು ಹಲವು ಪ್ರಶ್ನೆಗಳು ಮೂಡಿವೆ.

ಮಾ. 3ರ ಸಂಜೆ ವೇಳೆಯಲ್ಲಿ ನದಿಯ ತೀರ ಭಾಗದಲ್ಲಿ ನೀರಿನ ಮೇಲೆ ತೇಲುತ್ತಿದ್ದ ಆಧಾರ್‌ ಕಾರ್ಡ್‌ಗಳ ಗುಂಪನ್ನು ಸ್ಥಳೀಯ ವ್ಯಕ್ತಿಯೊಬ್ಬರು ಗಮನಿಸಿ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಅವು ಪುದು ಗ್ರಾಮದ ನಾಗರಿಕರದ್ದೇ ಆಧಾರ್‌ ಕಾರ್ಡ್‌ಗಳಾಗಿರುವುದು ಕಂಡುಬಂದಿದೆ. ಆದರೆ ಅವು ನದಿಗೆ ಹೇಗೆ ಬಂದವು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷರು, ಆಧಾರ್‌ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಗ್ರಾಮಸ್ಥರು ಅರ್ಜಿ ಸಲ್ಲಿಸಿದ್ದರಿಂದ ಅಂಚೆ ಮೂಲಕ ಕಾರ್ಡ್‌ಗಳು ಬರುವ ನಿರೀಕ್ಷೆಯಲ್ಲಿ ಹಲವರು ಕಾಯುತ್ತಿದ್ದರು. ಕಾರ್ಡ್‌ಗಳು ತಡವಾದ ಕಾರಣ ಜನರು ಸೈಬರ್ ಕೇಂದ್ರಗಳಲ್ಲಿ ಪ್ರತಿಗಳನ್ನು ಪಡೆಯುತ್ತಿದ್ದರು. ಆದರೆ ಮೂಲ ಕಾರ್ಡ್‌ಗಳು ಬಂದಿದ್ದರೂ ಅವುಗಳನ್ನು ಸರಿಯಾಗಿ ವಿತರಣೆ ಮಾಡಲಾಗಿಲ್ಲವೆಂದು ಅಂಚೆ ಇಲಾಖೆಯ ವಿರುದ್ಧ ಅವರು ಆರೋಪ ವ್ಯಕ್ತಪಡಿಸಿದ್ದಾರೆ.

ಇದೀಗ ನದಿಯಲ್ಲಿ ಆಧಾರ್‌ ಕಾರ್ಡ್‌ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ. ಸಂಬಂಧಪಟ್ಟ ಅಧಿಕಾರಿಗಳೇ ಕಾರ್ಡ್‌ಗಳನ್ನು ಗ್ರಾಮಸ್ಥರಿಗೆ ನೀಡದೇ ತ್ಯಜಿಸಿದ್ದಾರೆಯೇ ಅಥವಾ ಬೇರೆ ಯಾವ ಕಾರಣದಿಂದ ಅವು ನದಿಗೆ ಸೇರಿವೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. “ಅಂಚೆ ಮೂಲಕ ಕಾರ್ಡ್ ಬರುತ್ತದೆ ಎಂದು ನಾವು ಕಾಯುತ್ತಿದ್ದೆವು, ಆದರೆ ಕೊನೆಗೆ ನದಿಯಲ್ಲೇ ಸಿಕ್ಕಿವೆ” ಎಂದು ಗ್ರಾಮಸ್ಥರೊಬ್ಬರು ವ್ಯಂಗ್ಯವಾಗಿ ಹೇಳಿದ್ದಾರೆ.

Previous Post

ನಂದಿಕೂರು ಬಯೋ ಡೀಸೆಲ್ ಘಟಕಕ್ಕೆ ಮಾಲಿನ್ಯ ಮಂಡಳಿ ತಾತ್ಕಾಲಿಕ ಬೀಗ…!

Next Post

ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ…!

ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿ ನಿಧನ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check