Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!

Dhrishya News by Dhrishya News
05/03/2026
in ಕರಾವಳಿ, ಸುದ್ದಿಗಳು
0
ಮಲ್ಪೆ ಬಂದರು ಪ್ರಕರಣ: ಪೊಲೀಸ್ ಔಟ್‌ಪೋಸ್ಟ್ ಸ್ಥಾಪನೆಗೆ ಒತ್ತಾಯ…!
0
SHARES
24
VIEWS
Share on FacebookShare on Twitter

ಉಡುಪಿ, ಮಾ. 05: ಮಲ್ಪೆ ಬಂದರಿನಲ್ಲಿ ಏಲಂ ಕಾರ್ಮಿಕನ ಮೇಲೆ ಬೋಟ್ ಮಾಲೀಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು), ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಚಿಂತಕ ಫಣಿರಾಜ್, “ಮಲ್ಪೆ ಬಂದರಿನಲ್ಲಿ ಕಾರ್ಮಿಕರನ್ನು ಜಾತಿ–ಮತದ ಆಧಾರದ ಮೇಲೆ ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾರ್ಮಿಕರ ಮೇಲೆ ಫ್ಯಾಸಿಸ್ಟ್ ಮನೋಭಾವದ ದಬ್ಬಾಳಿಕೆ ನಡೆಯುತ್ತಿದೆ” ಎಂದು ಆರೋಪಿಸಿದರು.

“ಬಂದರಿನಲ್ಲಿ ಇಂತಹ ದೌರ್ಜನ್ಯಗಳು ನಡೆಯುತ್ತಿದ್ದರೂ ಪೊಲೀಸರು ಮೌನ ವಹಿಸಿರುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, “ಮಲ್ಪೆ ಬಂದರು ಎಲ್ಲ ಧರ್ಮ ಹಾಗೂ ಸಮುದಾಯದ ಜನರಿಗೆ ದುಡಿಯುವ ಅವಕಾಶ ಇರುವ ಸ್ಥಳ. ಆದರೆ ಅಲ್ಲಿನ ಕೆಲ ಬಲಿಷ್ಠ ಸಮುದಾಯದವರು ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಅಸ್ವೀಕಾರಾರ್ಹ” ಎಂದು ಹೇಳಿದರು.

ಸಹಬಾಳ್ವೆ ಉಡುಪಿ ಸಂಚಾಲಕ ಇದ್ರಿಸ್ ಹೂಡೆ ಮಾತನಾಡಿ, “ಮಲ್ಪೆ ಬಂದರು ದೇಶದ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿದೆ. ಇಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಜನರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ಬಂದರಿನಲ್ಲಿ ಪ್ರತಿಯೊಬ್ಬರಿಗೂ ಕೆಲಸ ಮಾಡುವ ಹಕ್ಕು ಇದೆ” ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಏಲಂ ಕಾರ್ಮಿಕ ಶೇಕ್ ಆಯೂಬ್ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದರು.

ಹಲ್ಲೆಗೆ ಒಳಗಾದ ಕಾರ್ಮಿಕ ಶೇಕ್ ಆಯೂಬ್ ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು. ಜೊತೆಗೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದಲ್ಲದೆ, ಸಂತ್ರಸ್ತ ಕಾರ್ಮಿಕನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು. ಮಲ್ಪೆ ಬಂದರಿನಲ್ಲಿ ಪೊಲೀಸ್ ಔಟ್‌ಪೋಸ್ಟ್ ಸ್ಥಾಪಿಸಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂಬುದಾಗಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಸುರೇಶ್ ಕಲ್ಲಾಗರ, ಚಂದ್ರಶೇಖರ್ ದೇವಾಡಿಗ, ಮುಂಜುನಾಥ ಬಾಳೆಕುದ್ರು, ಶಶಿಧರ ಗೊಲ್ಲ, ಅಜೀಜ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Previous Post

ಪ್ರಾಮಾಣಿಕತೆಗೆ ಮೆಚ್ಚುಗೆ: ಪ್ರಯಾಣಿಕರ ಚಿನ್ನದ ಸರ ಮರಳಿ ನೀಡಿದ ಬಸ್ ಕಂಡಕ್ಟರ್…!

Next Post

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check