Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಂಗಭೂಮಿ ಉಡುಪಿ ನಾಟಕ ಸ್ಪರ್ಧೆ: ಸುಮನಸಾ ಕೊಡವೂರು ತಂಡಕ್ಕೆ ಪ್ರಥಮ ಸ್ಥಾನ…!

Dhrishya News by Dhrishya News
06/03/2026
in ಕರಾವಳಿ, ಸುದ್ದಿಗಳು
0
ರಂಗಭೂಮಿ ಉಡುಪಿ ನಾಟಕ ಸ್ಪರ್ಧೆ: ಸುಮನಸಾ ಕೊಡವೂರು ತಂಡಕ್ಕೆ ಪ್ರಥಮ ಸ್ಥಾನ…!
0
SHARES
10
VIEWS
Share on FacebookShare on Twitter

ಉಡುಪಿ, ಮಾ.06: ಕಳೆದ ಡಿಸೆಂಬರ್ 4ರಿಂದ 15ರವರೆಗೆ ರಂಗಭೂಮಿ ಉಡುಪಿ ಆಯೋಜಿಸಿದ್ದ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡದ ‘ಈದಿ’ ನಾಟಕಕ್ಕೆ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ರಂಗಭೂಮಿ ರಂಗೋತ್ಸವದ ಎರಡನೇ ದಿನ ಈ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು. ಈ ವೇಳೆ ಡಾ. ಟಿ.ಎಂ.ಎ. ಪೈ, ಎಸ್.ಎಲ್. ನಾರಾಯಣ ಭಟ್ ಹಾಗೂ ಮಲ್ಪೆ ಮಧ್ವರಾಜ್ ಸ್ಮಾರಕವಾಗಿ ನೀಡಲಾಗುವ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ವಿವಿಧ ವಿಭಾಗಗಳ ಪ್ರಶಸ್ತಿಗಳನ್ನು ವಿಜೇತರಿಗೆ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಂಗ ಶಿಕ್ಷಣ ಕಾರ್ಯಕ್ರಮವನ್ನು ಉಡುಪಿಯ 25 ಶಾಲೆಗಳಿಗೆ ವಿಸ್ತರಿಸುವ ಉದ್ದೇಶವಿದೆ. ಇದಕ್ಕಾಗಿ ವಿವಿಧ ಸಂಘ-ಸಂಸ್ಥೆಗಳ ಸಹಕಾರ ಹಾಗೂ ಪ್ರೋತ್ಸಾಹ ಅಗತ್ಯವಿದೆ ಎಂದು ಹೇಳಿದರು.

ಪ್ರಶಸ್ತಿ ವಿತರಿಸಿದ ಹಿರಿಯ ರಂಗಕರ್ಮಿ ಹಾಗೂ ನಿವೃತ್ತ ಪ್ರಾಂಶುಪಾಲ ನಟರಾಜ ದೀಕ್ಷಿತ್ ಮಾತನಾಡಿ, ಜೀವನದಲ್ಲಿ ನಾಟಕ ಮಾಡುವುದು ಮಾತ್ರವಲ್ಲ, ನಾಟಕದೊಳಗೆ ಜೀವನದ ಅರ್ಥವನ್ನು ಹುಡುಕುವ ಮನೋಭಾವ ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಂದಿಕೂರಿನ ಅದಾನಿ ಪವರ್ ಕಂಪನಿಯ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ., ರಂಗಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿದರು. ಪ್ರಭಾಕರ ಜಿ. ತುಮರಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ, ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡದ ‘ಈದಿ’ ನಾಟಕದ ಮರುಪ್ರದರ್ಶನ ನಡೆಯಿತು.

Previous Post

ಕಾಡಾನೆ–ಮಾನವ ಸಂಘರ್ಷ ನಿಯಂತ್ರಣಕ್ಕೆ ರಾಜ್ಯದಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ..!

Next Post

ಮಾ.11ರಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾ.11ರಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ…!

ಮಾ.11ರಿಂದ ರಾಜ್ಯಾದ್ಯಂತ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026

Recent News

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved