Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

2022, 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ: ನಾಲ್ವರು ಸಾಧಕರಿಗೆ ಸಂದ ಗರಿಮೆ

Dhrishya News by Dhrishya News
24/05/2023
in मौसम
0
0
SHARES
12
VIEWS
Share on FacebookShare on Twitter

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022 ಹಾಗೂ 2023ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟಗೊಂಡಿದೆ. ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿವರ್ಷ ಪರಿಷತ್ತಿನ ಮೂಲಕ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ.ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅಧ್ಯಕ್ಷರಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿ ಸ್ಥಾಪಿಸಿದ್ದಾರೆ.12,61,000 ( ಹನ್ನೆರಡು ಲಕ್ಷದ ಅರವತ್ತೊಂದು ಸಾವಿರ)ರೂ. ಗಳ ಖಾಯಂ ದತ್ತಿನಿಧಿಯನ್ನು ಸ್ಥಾಪಿಸಿರುತ್ತಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000 (ಮೂವತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ.

ದತ್ತಿ ದಾನಿಗಳ ಸೂಚನೆಯ ಮೇರೆಗೆ 2022ನೇ ಸಾಲಿನ ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಹಿರಿಯ ಲೇಖಕಿ ಶ್ರೀಮತಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ. 2023ನೆಯ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ. ಟಿ. ಲಲಿತಾ ನಾಯಕ್ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ, ವಿಮರ್ಶಕಿ ಡಾ. ಎಂ. ಎಸ್. ಆಶಾದೇವಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

Previous Post

ಅತಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಜನರ ಸೇವೆ ಶುರುಮಾಡಲಿವೆ – ಸಿದ್ಧರಾಮಯ್ಯ ಟ್ವಿಟ್..!!

Next Post

JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

ಆ. 2 :ಅಂಬಲಪಾಡಿ ದೇವಸ್ಥಾನದಲ್ಲಿ ಭಜನಾ ಪರಿಷತ್ ತಾಲೂಕು ಮಟ್ಟದ ‘ಭಜನೋತ್ಸವ’

30/07/2026
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ

30/07/2026
ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

ವಿದುಷಿ ಡಾ. ಉಷಾ ಹೆಬ್ಬಾರ್ ಅವರಿಗೆ ಗುರುವಂದನೆ

30/07/2026
ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

ಉಡುಪಿ: ಆಗಸ್ಟ್ 29ರಂದು ‘ಮುದ್ದು ಕೃಷ್ಣ ಸ್ಪರ್ಧೆ–2026’ ಆಯೋಜನೆ..!

30/07/2026

Recent News