Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Dhrishya News by Dhrishya News
06/03/2026
in ಕರಾವಳಿ
0
ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್
0
SHARES
10
VIEWS
Share on FacebookShare on Twitter

ಉಡುಪಿ: ಮಾರ್ಚ್ 06:17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಎಲ್ಲೋ ಸಾಲ ಮಾಡಿಯಾದ್ರೂ ಅಧಿಕಾರಕ್ಕೆ ಅಂಟಿಕೊಳ್ಳುವ ಕಸರತ್ತು ಮಾಡಿದಂತೆ ತೋರುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ರಾಜ್ಯದ ಒಟ್ಟು ಸಾಲ ರೂ.8,24,389 ಕೋಟಿಗೆ ಏರಿದೆ. ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ ಮಾತ್ರ. ಈ ಸಾಲಿನ ಬಹಿರಂಗ ಮಾರುಕಟ್ಟೆ ಸಾಲದ ಗಾತ್ರವೇ ರೂ.1,22,340 ಕೋಟಿ. ರಾಜ್ಯವನ್ನು ಎತ್ತ ತೆಗೆದುಕೊಂಡು ಹೋಗುತ್ತಿದ್ದೀರಿ ಸ್ವಾಮಿ?

ಕೇಂದ್ರದ ಬಜೆಟ್ ಬಂದ ಕೂಡಲೇ ಕರ್ನಾಟಕಕ್ಕೆ ಅನ್ಯಾಯ ಎಂದು ಸುಳ್ಳು ಲೆಕ್ಕ ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುವ ನಿಮಗೆ ರಾಜ್ಯದ ಒಂದು ಸಮುದಾಯ ಮಾತ್ರ ಪ್ರಾಮುಖ್ಯವಾಯಿತೇ?

ಓಲೈಕೆ ರಾಜಕಾರಣವನ್ನೇ ಪಕ್ಷದ ಸಿದ್ಧಾಂತವನ್ನಾಗಿಸಿದ ಇಂದಿರಾ ಕಾಂಗ್ರೆಸ್ ನ ಕರ್ನಾಟಕ ಸರಕಾರದ 17 ಬಜೆಟ್ ಮಂಡಿಸಿದ ಖ್ಯಾತಿಯ ಬಜೆಟ್ ಶೂರ ಮುಖ್ಯಮಂತ್ರಿ ಸಿದ್ದರಾಮಯ್ಯ “ಬ್ರದರ್ಸ್ ಬಜೆಟ್” ಮಂಡಿಸಿ ರಾಜ್ಯದ ಬಹುಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ.

ವಕ್ಫ್ ಆಸ್ತಿ ಅಭಿವೃದ್ಧಿ, ಅಲ್ಪಸಂಖ್ಯಾತರ ಮಕ್ಕಳಿಗೆ ಲ್ಯಾಪ್ ಟಾಪ್ ಗೆ ಹಣ, ಅಲ್ಪಸಂಖ್ಯಾತ ಖಾಲಿ ಹುದ್ದೆ ತುಂಬಲು ಕ್ರಮ, ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಗೆ 4 ವಸತಿ ನಿಲಯ, ಅಲ್ಪಸಂಖ್ಯಾತ ನಿಗಮದ ಸಾಲ ಬಡ್ಡಿ ಮನ್ನಾ, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣ, ಅಲ್ಪಸಂಖ್ಯಾತ ಮಹಿಳೆಯರಿಗಾಗಿ ಸೊಸೈಟಿ ಸ್ಥಾಪನೆ, ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ರೂ.3 ಲಕ್ಷದ ವರೆಗೆ ಸಹಾಯ ಧನ, ಅಲ್ಪಸಂಖ್ಯಾತ ನಿರ್ಗತಿಕರಿಗೆ ವ್ರದ್ಧಾಶ್ರಮ, ಅಲ್ಪಸಂಖ್ಯಾತ ಕಾಲೋನಿಗಳಿಗೆ ನೂರಾರು ಕೋಟಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿ, ಅಲ್ಪಸಂಖ್ಯಾತರಿಗಾಗಿ ವಸತಿ ಶಾಲೆ, ಅಲ್ಪಸಂಖ್ಯಾತರ ಶಾಲೆಗಳ ಅಭಿವೃದ್ಧಿಗಾಗಿ 1,000 ಕೋಟಿ ರೂಪಾಯಿ. ಹೇಳಿ ಮುಖ್ಯಮಂತ್ರಿಗಳೇ ಬಹುಸಂಖ್ಯಾತರು ಈ ರಾಜ್ಯದ ಪ್ರಜೆಗಳಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಕರಾವಳಿ ಕರ್ನಾಟಕವನ್ನು ಪೂರ್ತಿ ಕಡೆಗಣಿಸಿದ್ದು ಕೇವಲ 2 ಪೊಲೀಸ್ ಸ್ಟೇಷನ್ ಗಳನ್ನು ನೀಡಿದ್ದೆ ಈ ಬಜೆಟ್ ನ ಹೆಗ್ಗಳಿಕೆ.

ರಾಜ್ಯದ ರೈತರು, ವಿದ್ಯಾರ್ಥಿಗಳು, ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ಯುವಕರು, ಬಡ ಜನತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಜನರನ್ನು ನಿರ್ಲಕ್ಷಿಸಿದ ಮತ್ತು ಕೇವಲ ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿದ ಬಜೆಟ್ ಇದಾಗಿದೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

“ರಾಜ್ಯ ಬಜೆಟ್ ‘ಬೃಹತ್ ಶೂನ್ಯ’: ವಿ. ಸುನಿಲ್ ಕುಮಾರ್ ಪ್ರತಿಕ್ರಿಯೆ ”

Next Post

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ - ಉದಯ್ ಶೆಟ್ಟಿ ಮುನಿಯಾಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check