Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ…!

Dhrishya News by Dhrishya News
07/03/2026
in ಕರಾವಳಿ, ಸುದ್ದಿಗಳು
0
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ…!
0
SHARES
20
VIEWS
Share on FacebookShare on Twitter

ನವದೆಹಲಿ, ಮಾ. 07: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಆತಂಕ ಹೆಚ್ಚಿದ್ದು, ಇದರ ಪ್ರಭಾವ ಭಾರತದಲ್ಲೂ ಕಾಣಿಸತೊಡಗಿದೆ. ಗೃಹ ಬಳಕೆಯ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿಯಿಂದ ಹೆಚ್ಚಳ ಜಾರಿಯಾಗಿದೆ.

14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 60 ರೂ. ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಇದರ ಬೆಲೆ 853 ರೂ.ಯಿಂದ 913 ರೂ.ಗೆ ಏರಿಕೆಯಾಗಿದೆ. ಅದೇ ರೀತಿಯಾಗಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರವನ್ನು 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ರೂ. ಆಗಿದ್ದು, ಮುಂಬೈನಲ್ಲಿ 1,835 ರೂ. ತಲುಪಿದೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ಜಾಗತಿಕ ಇಂಧನ ಪೂರೈಕೆಯ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಈ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರ ಸಮೀಪದಿಂದ ಗಮನಿಸುತ್ತಿದೆ.

ಇದರ ನಡುವೆ ದೇಶದಲ್ಲಿ ಎಲ್‌ಪಿಜಿ ಪೂರೈಕೆ ವ್ಯತ್ಯಯವಾಗದಂತೆ ಸಾರ್ವಜನಿಕ ಹಾಗೂ ಖಾಸಗಿ ವಲಯದ ಅನಿಲ ಸಂಸ್ಕರಣಾ ಘಟಕಗಳಿಗೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಇಂಧನ ಕೊರತೆ ಬಗ್ಗೆ ಆತಂಕ ಬೇಡ:

ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಇದ್ದರೂ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸೇರಿದಂತೆ ಅಗತ್ಯ ಪ್ರಮಾಣದ ಇಂಧನ ದಾಸ್ತಾನು ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ದೇಶದಲ್ಲಿ ಸಾಕಷ್ಟು ಎಲ್‌ಪಿಜಿ ಸಂಗ್ರಹವಿದ್ದು, ಅಗತ್ಯವಿದ್ದಲ್ಲಿ ಗಲ್ಫ್ ರಾಷ್ಟ್ರಗಳ ಹೊರತಾದ ದೇಶಗಳಿಂದಲೂ ಆಮದು ಮಾಡಲು ತೈಲ ಕಂಪನಿಗಳು ಸಿದ್ಧವಾಗಿವೆ.

ಕಚ್ಚಾ ತೈಲ ಪೂರೈಕೆಗೆ ಆತಂಕ:

ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ನಿರ್ಬಂಧ ಹೇರಿರುವುದರಿಂದ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯ ಸಾಧ್ಯತೆ ಹೆಚ್ಚಾಗಿದೆ.

ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಸಿಲಿಂಡರ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ದರಗಳಿಗೆ ಅನುಗುಣವಾಗಿ ಈ ಪರಿಷ್ಕರಣೆ ನಡೆಯುತ್ತದೆ. ಅದರಂತೆ, ಮಾರ್ಚ್ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 110 ರೂ. ಹೆಚ್ಚಿಸಲಾಗಿತ್ತು.

Previous Post

ಕಾಪು ಬಳಿ ಸರಣಿ ಅಪಘಾತ: ನಾಲ್ಕು ವಾಹನ ಜಖಂ, ಮೂವರಿಗೆ ಗಾಯ…..!

Next Post

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check