Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

Dhrishya News by Dhrishya News
07/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!
0
SHARES
8
VIEWS
Share on FacebookShare on Twitter

ಬೆಂಗಳೂರು, ಮಾ. 07: ರಾಜ್ಯ ಸರ್ಕಾರವು ರೂಪಿಸುವ ಎಲ್ಲಾ ಕಾನೂನುಗಳನ್ನು ಕನ್ನಡ ಭಾಷೆಯಲ್ಲೇ ಸಿದ್ಧಪಡಿಸುವುದರ ಜೊತೆಗೆ, ಕೇಂದ್ರ ಸರ್ಕಾರ ಇದುವರೆಗೆ ಜಾರಿಗೆ ತಂದಿರುವ ಪ್ರಮುಖ ಕಾನೂನುಗಳನ್ನು ಕನ್ನಡಕ್ಕೆ ಅನುವಾದಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದೆ.

ಇದೇ ವೇಳೆ ನ್ಯಾಯಾಂಗ ವ್ಯವಸ್ಥೆಯ ಸುಧಾರಣೆಗೆ ಒತ್ತು ನೀಡಿರುವ ಸರ್ಕಾರ, ನ್ಯಾಯಾಲಯಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 175 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ತಿಳಿಸಿದೆ. ಈ ಅನುದಾನದಿಂದ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಹಾಗೂ ನ್ಯಾಯಾಧೀಶರಿಗಾಗಿ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತದೆ.

ಕಾಗದರಹಿತ, ದಕ್ಷ ಹಾಗೂ ನಾಗರಿಕ ಕೇಂದ್ರಿತ ನ್ಯಾಯಾಂಗ ವ್ಯವಸ್ಥೆಯನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ‘ಇ-ಕೋರ್ಟ್’ಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ವೆಚ್ಚ ಮಾಡುವುದಾಗಿ ಸರ್ಕಾರ ಹೇಳಿದೆ.

ಇನ್ನೊಂದೆಡೆ, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೂ ಬಜೆಟ್‌ನಲ್ಲಿ ಪ್ರಸ್ತಾವಿಸಲಾಗಿದೆ.

ಅಡ್ವಕೇಟ್ ಜನರಲ್ ಕಚೇರಿಯಲ್ಲಿ ಗ್ರಂಥಾಲಯ ಹಾಗೂ ವೀಡಿಯೋ ಕಾನ್ಫರೆನ್ಸ್ (ವಿ.ಸಿ.) ಸೌಲಭ್ಯ ಕಲ್ಪಿಸುವುದರ ಜೊತೆಗೆ, ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕಚೇರಿಗಳಲ್ಲಿ CCMS ಮತ್ತು e-filing ವ್ಯವಸ್ಥೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸುಧಾರಿಸಲು 5 ಕೋಟಿ ರೂ. ಮೀಸಲಿಡಲಾಗಿದೆ.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮಧ್ಯಸ್ಥಿಕೆ ವ್ಯವಸ್ಥೆಗೆ ಉತ್ತೇಜನ ನೀಡಲಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಹೊಂದಿರುವ ನ್ಯಾಯಾಧೀಶರು ಹಾಗೂ ವಕೀಲರಿಗೆ ವಿಶೇಷ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.

Previous Post

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

Next Post

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News