Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

Dhrishya News by Dhrishya News
07/03/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!
0
SHARES
15
VIEWS
Share on FacebookShare on Twitter

ಬೆಂಗಳೂರು, ಮಾ.07: 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಅಡಿಕೆ ತೋಟಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸಲು ಅಧ್ಯಯನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ₹10 ಕೋಟಿ ಅನುದಾನ ಮೀಸಲಿಡಲಾಗಿದೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುವ ವಿವಿಧ ರೋಗಗಳು ಮತ್ತು ತೆಂಗಿನ ತೋಟಗಳಲ್ಲಿ ಕಂಡುಬರುವ ಕಪ್ಪುತಲೆ ಹುಳು, ಬಿಳಿ ನೊಣಗಳ ನಿಯಂತ್ರಣಕ್ಕಾಗಿ ಸಮುದಾಯ ಆಧಾರಿತ ಕೀಟ–ರೋಗ ನಿಯಂತ್ರಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಭಾಗಿತ್ವದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.

ಇದರ ಜೊತೆಗೆ ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು ₹64 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ. ಮುಂದಿನ ಹಂತಗಳಲ್ಲಿ ರಾಜ್ಯದ ವಿವಿಧ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ.

ರೈತರ ಆದಾಯ ಹೆಚ್ಚಿಸುವ ಪ್ರಮುಖ ಕ್ಷೇತ್ರವಾಗಿ ತೋಟಗಾರಿಕೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಉತ್ತಮ ಗುಣಮಟ್ಟದ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸುಮಾರು 89 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೊಸ ತೋಟಗಾರಿಕೆ ಬೆಳೆಗಳನ್ನು ಬೆಳೆಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.

ಇದೇ ಅವಧಿಯಲ್ಲಿ 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಕೆಯಾಗಿದ್ದು, 2.36 ಲಕ್ಷ ರೈತರು ಇದರ ಪ್ರಯೋಜನ ಪಡೆದಿದ್ದಾರೆ. ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ ಒಟ್ಟು ₹2,378 ಕೋಟಿ ಪರಿಹಾರ ವಿತರಿಸಲಾಗಿದೆ. ಅಲ್ಲದೆ 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣಕ್ಕೂ ಸಹಾಯ ನೀಡಲಾಗಿದೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಫಾರಂಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಬಳಸಿಕೊಂಡು ಉನ್ನತ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಪಿಪಿಪಿ (PPP) ಮಾದರಿಯಲ್ಲಿ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Previous Post

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ನಲ್ಲಿ ಘೋಷಣೆ…!

Next Post

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆಗೆ ಸಂಪೂರ್ಣ ಹಾನಿ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News